Honnavar|ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್ ಗೆ ಜೈಲು ಶಿಕ್ಷೆ
Honnavar|ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್ ಗೆ ಜೈಲು ಶಿಕ್ಷೆ
ಕಾರವಾರ :- ಮಟ್ಕಾ ಆಡಿಸುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗೆ 8 ವರ್ಷಗಳ ಬಳಿಕ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಉತ್ತರ ಕನ್ನಡ ಜಿಲ್ಲೆತ ಹೊನ್ನಾವರ ಮೂಲದ ಪೊಲೀಸ್ ಸಿಬ್ಬಂದಿ ಮುರುಳೀಧರ ನಾಯ್ಕ ಶಿಕ್ಷೆಗೊಳಗಾದ ಆರೋಪಿ.
2017ರಲ್ಲಿ ಪಿಗ್ನಿ ಎಜೆಂಟ್ ಚಂದ್ರಹಾಸ ಎನ್ನುವವರು ಮಟ್ಕಾ ಹಣವನ್ನು ಸಂಗ್ರಹಿಸುವ ವಿಷಯ ಅರಿತ ಪೊಲೀಸ್ ಸಿಬ್ಬಂದಿ ಮುರುಳೀಧರ ನಾಯ್ಕ ಅವರು ಪ್ರತಿ ಎರಡು ವಾರಕ್ಕೆ 22 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ:-Honnavar:ಹೊನ್ನಾವರದಲ್ಲಿ ಕಂದಕಕ್ಕೆ ಉರುಳಿದ ಬಸ್ -14 ಜನರಿಗೆ ಗಾಯ
ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿ ದೂರು ನೀಡಿದ್ದ ಚಂದ್ರಹಾಸ್ ಎನ್ನುವವರು ಮುರುಳೀಧರ್ ನಾಯ್ಕ 22 ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.
ಈ ಪ್ರಕರಣ ಎಂಟು ವರ್ಷಗಳ ಸುದೀರ್ಘ ವಾದ ವಿವಾದಗಳು ನಡೆದು ಕಾರವಾರದ ಜಿಲ್ಲಾ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ತೀರ್ಪು ನೀಡಿದ್ದಾರೆ.