For the best experience, open
https://m.kannadavani.news
on your mobile browser.
Advertisement

Prajwal revanna ಗೆ ಎಚ್ಚರಿಕೆ ಪತ್ರ ಬರೆದ ದೇವೇಗೌಡರು| ಪತ್ರದಲ್ಲೇನಿದೆ ವಿವರ ನೋಡಿ.

07:15 PM May 23, 2024 IST | ಶುಭಸಾಗರ್
prajwal revanna ಗೆ ಎಚ್ಚರಿಕೆ ಪತ್ರ ಬರೆದ ದೇವೇಗೌಡರು  ಪತ್ರದಲ್ಲೇನಿದೆ ವಿವರ ನೋಡಿ

Bangalore, may 23: ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡರು ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಖಡಕ್ ಎಚ್ಚರಿಕೆ ನೀಡುವ ಪತ್ರ ಬರೆದಿದ್ದಾರೆ.

Advertisement

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರಸಿಕೊಂಡಿದ್ದು ರೆಡ್ ಕಾರ್ನರ್ ನೋಟಿಸ್ ಸಹ ನೀಡಲಾಗಿದೆ.

ಎಚ್. ಡಿ. ದೇವೇಗೌಡರು ಗುರುವಾರ ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂಬ ಶೀರ್ಷಿಕೆಯಡಿ ಪತ್ರ (letter ) ಬರೆದು social media ದಲ್ಲಿ ಪೋಸ್ಟ್ ಮಾಡಲಾಗಿದೆ.

ಗೌಡರ ಪತ್ರದಲ್ಲೇನಿದೆ.?

ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು' ಎಂದು ಪತ್ರವನ್ನು ಆರಂಭಿಸಿದ್ದಾರೆ.

ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್. ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ' ಎಂದು ಪತ್ರದಲ್ಲಿ ಹೇಳಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ' ಎಂದು ಪತ್ರದಲ್ಲಿ ಹೇಳಿದ್ದಾರೆ.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ ಎಂದು ಭಾವುಕರಾಗಿದ್ದಾರೆ.

Advertisement
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ