Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 6 ರವರೆಗೆ ಮಳೆ ಎಚ್ಚರಿಕೆ
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 6 ರವರೆಗೆ ಮಳೆ ಎಚ್ಚರಿಕೆ
ಬೆಂಗಳೂರು: ಮೇ 6 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ(Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲಿ ಮಳೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಮಂಡ್ಯದಲ್ಲಿ ಮೇ 6 ರವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಗದಗ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ:-Ankola: ಫಕ್ ಯು ಪಾಕಿಸ್ತಾನ್- ರಸ್ತೆಗೆ ಬಿತ್ತಿ ಪತ್ರ ಅಂಟಿಸಿ ಸರ್ಕಾರಿ ನೌಕರನ ಅಕ್ರೋಶ
ಹವಾಮಾನ ಇಲಾಖೆ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ಈಗಾಗಲೇ ಚಂಡಮಾರುತದ ಪರಿಚಲನೆ ರೂಪುಗೊಂಡಿದೆ ಮತ್ತು ಮರಾಠಾವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಲಿಸುತ್ತಿದೆ. ಈ ಬದಲಾವಣೆ ಕರ್ನಾಟಕದ ಹವಾಮಾನ ಪರಿಸ್ಥಿತಿಗಳ ಮೇಲೆ ಪ್ರಭಾವ ಬೀರುತ್ತಿದೆ ಎಂದು ತಿಳಿಸಿದೆ.
ಮೇ 1 ರಿಂದ ಮೇ 3 ರವರೆಗೆ ಬೆಂಗಳೂರು ನಗರ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನಂತರ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮುಂಗಾರು ಪೂರ್ವ ಮಳೆಯಾಗುವ ನಿರೀಕ್ಷೆಯಿದೆ.
ಕರಾವಳಿಯಲ್ಲಿ ಹೇಗಿರಲಿದೆ ಮೇ 1ರ ವಾತಾವರಣ? (Coastal weather)
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸಂಜೆ ವೇಳೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮೋಡಕವಿದ ವಾತಾವರಣ ಇರಲಿದ್ದು ಅಲ್ಪ ಮಳೆಯಾಗಲಿದೆ. ಘಟ್ಟಭಾಗದಲ್ಲಿ ಅಲ್ಪ ಮಳೆಯಾಗಲಿದ್ದು ,ಸಿದ್ದಾಪುರ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.