KSRTC| ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನುಮಂದೆ ಸ್ಮಾರ್ಟ ಕಾರ್ಡ! ಹೇಗೆ ಪಡೆಯುವುದು?
KSRTC| ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನುಮಂದೆ ಸ್ಮಾರ್ಟ ಕಾರ್ಡ! ಹೇಗೆ ಪಡೆಯುವುದು?

ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ.
ಈ ಸ್ಮಾರ್ಟ್ ಕಾರ್ಡ್‌ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ನೀಡಲು ಈಗಾಗಲೇ ಈ ಕುರಿತ ಕಡತ ಹಣಕಾಸು ಇಲಾಖೆಗೆ ಹೋಗಿದ್ದು, ಕೇವಲ ಅನುಮತಿಯ ಬಾಕಿಯಿದೆ. ಸಾರಿಗೆ ಇಲಾಖೆ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದೆ.
ಸ್ಮಾರ್ಟ್ ಕಾರ್ಡ್ ಪಡೆಯಲು ಮಹಿಳೆಯರು ಗ್ರಾಮ ಒನ್ (Grama one) ಅಥವಾ ಬೆಂಗಳೂರು ಒನ್ (Bangalur one) ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ:-Karwar :ಸಾಯಿ ಮಂದಿರದಲ್ಲಿ 15 ಕೆಜಿ ಬೆಳ್ಳಿ ಕಳ್ಳತನ ಆರೋಪ ಸಿಸಿ ಕ್ಯಾಮರಾದಲ್ಲಿ ಸೆರೆ!
ಅಥವಾ ಸೇವಾಸಿಂಧು ವೆಬ್‌ಸೈಟ್ ಬಳಸಿ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದ ನಂತರ ತಕ್ಷಣವೇ ಪ್ರಿಂಟ್ ಮಾಡಿದ ರಸೀದಿಯೇ ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ. ಮಾಸಿಕ ಪಾಸ್ ಅಥವಾ ಕಾರ್ಡ್ ವಿತರಣೆ ಇಲ್ಲ. ಇದು ಶಾಶ್ವತ ಪಾಸ್‌ನಂತೆ ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ:-Karnataka:-ಮಿನರಲ್ ವಾಟರ್ ಕುಡಿಯುವವರೇ ಎಚ್ಚರ. ಪ್ರತಿಯೊಬ್ಬರು ಓದಲೇಬೇಕಾದ ಸ್ಟೋರಿ!
ಪ್ರಿಂಟ್ ಆದ ಮಾಹಿತಿಯುಳ್ಳ ದಾಖಲೆಯೇ ಸ್ಮಾರ್ಟ್ ಕಾರ್ಡ್ ಆಗಿರಲಿದೆ. ಮಾಸಿಕ ಪಾಸಿನಂತೆ ಪ್ರತ್ಯೇಕ ಪಾಸ್ ವಿತರಣೆ ಇರುವುದಿಲ್ಲ.
ಅರ್ಜಿ ಸಲ್ಲಿಸಿದ ಕೂಡಲೇ ನೀಡಲಾಗುವ ಪ್ರಿಂಟ್‌ಔಟ್ ಅನ್ನು ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.
ಸೇವಾಸಿಂಧು ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಧಾರ್ ಕಾಡ್‌ರ್ನ್ನು ದಾಖಲೆಯಾಗಿ ಪರಿಗಣಿಸಿ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗತ್ತದೆ. ಸೇವಾಕೇಂದ್ರದಲ್ಲಿಯೇ ಸ್ಮಾಟ್‌ರ್ಕಾರ್ಡ್ ಪ್ರಿಂಟ್ ಹಾಕಲಾಗುತ್ತದೆ.
ಇದನ್ನೂ ಓದಿ:-KUMTA KSRTC ಡಿಫೋದಲ್ಲಿ ದಹಿಸಿದ ಬಸ್
ಈ ಸ್ಮಾರ್ಟ್ ಕಾರ್ಡ್‌ನ್ನು ಕೇವಲ ಕರ್ನಾಟಕದ ನಿವಾಸಿಗಳಿಗಷ್ಟೇ ನೀಡಲಾಗುತ್ತದೆ. ಆಧಾರ್ ಕಾರ್ಡ್ ವಿಳಾಸ ಕರ್ನಾಟಕದೊಳಗೇ ಇರಬೇಕಾದ್ದು ನಿಯಮ. ಶಕ್ತಿ ಯೋಜನೆಯ ಲಾಭ ಪಡೆಯಲು ಕೆಲವರು ಆಧಾರ್ ವಿಳಾಸ ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ ವಿಳಾಸ ಬದಲಿಸಿ ಸ್ಮಾರ್ಟ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದರೆ ಅದು ಅಂಗೀಕಾರವಾಗುವುದಿಲ್ಲ ಎಂದು ಮೂಲಗಳು ಹೇಳಿKSRTC