Rain news| ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ ಹೇಗಿರಲಿದೆ ವಾತಾವರಣ|ವಿವರ ನೋಡಿ
Rain news| ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ ಹೇಗಿರಲಿದೆ ವಾತಾವರಣ|ವಿವರ ನೋಡಿ
ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರವರೆಗೂ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟಂಬರ್ ಏಳರವರೆಗೆ ಹೆಚ್ಚಿನ ಮಳೆಯಾಗಲಿದೆ.ಇಂದು ಆರೆಂಜ್ ಅಲರ್ಟ ನೀಡಲಾಗಿದ್ದು ,ನಾಲ್ಕು ದಿನ ಯಲ್ಲೋ ಅಲರ್ಟ ಇರಲಿದೆ.
ಇದನ್ನೂ ಓದಿ:-Karnataka|ಈ IAS ಅಧಿಕಾರಿಗಳ ಸರ್ಕಾರಿ ಹಣದಲ್ಲಿ ಸ್ವಂತ ಖರ್ಚು ! ಪ್ರಶ್ನೆ ಮಾಡುವವರು ಯಾರು?
ಹೀಗಾಗಿ ಜಿಲ್ಲೆಯ ಕರಾವಳಿಯಲ್ಲಿ ಹೆಚ್ಚು ಮಳೆ ಹಾಗೂ ಮಲೆನಾಡು ಭಾಗದಲ್ಲಿ ಚದುರಿದ ಮಧ್ಯಮ ಮಳೆಯಾಗಲಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ ನೀಡಲಾಗಿದ್ದು ,ಚದುರಿದ ಭಾರಿ ಮತ್ತು ಮಧ್ಯಮ ಗಾತ್ರದ ಮಳೆಯಾಗಲಿದೆ.