For the best experience, open
https://m.kannadavani.news
on your mobile browser.
Advertisement

Rain News : ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ| ಚಳಿ ಇಬ್ಬನಿ ವಾತಾವರಣ

Rain news 29 october 2024 :ಸಾಕಪ್ಪ ಸಾಕು ಎನ್ನುವಷ್ಟ ರಾಜ್ಯದಲ್ಲಿ ಮಳೆಯಾಗಿದೆ .ಆದ್ರೆ ದೀಪಾವಳಿ (Depavali) ಗಾದ್ರೂ ಮಳೆ ಕಡಿಮೆಯಾಗುತ್ತೆ ಎಂಬ ನಿರೀಕ್ಷೆ ಹುಸಿಯಾಗಿದೆ.
09:11 AM Oct 29, 2024 IST | ಶುಭಸಾಗರ್
rain news   ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ  ಚಳಿ ಇಬ್ಬನಿ ವಾತಾವರಣ

Milan Enterprises Karwar

Advertisement

Reporting -sagar

Rain news 29 october 2024 :ಸಾಕಪ್ಪ ಸಾಕು ಎನ್ನುವಷ್ಟ ರಾಜ್ಯದಲ್ಲಿ ಮಳೆಯಾಗಿದೆ .ಆದ್ರೆ ದೀಪಾವಳಿ (Depavali) ಗಾದ್ರೂ ಮಳೆ ಕಡಿಮೆಯಾಗುತ್ತೆ ಎಂಬ ನಿರೀಕ್ಷೆ ಹುಸಿಯಾಗಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆ (Rain )ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಒಡಿಶಾದ ಮೇಲಿನ ಗಾಳಿಯ ಚಂಡಮಾರುತವು ಈಗ ದಕ್ಷಿಣ ಒಡಿಶಾದ ಉತ್ತರ ಆಂಧ್ರಪ್ರದೇಶ ಕರಾವಳಿಗೆ ಹೊಂದಿಕೊಂಡಿದೆ.

ಇದನ್ನೂ ಓದಿ:-Uttra kannda| ಮಳೆ ಅಲರ್ಟ ಎಲ್ಲಿ ಎಷ್ಟು ಮಳೆ? Dam ಮಟ್ಟ ಈಗೆಷ್ಟಿದೆ ವಿವರ ನೋಡಿ.

ಸಮುದ್ರ (sea)ಮಟ್ಟದಿಂದ 5.8 ಕಿ.ಮೀವರೆಗೆ ಎತ್ತರದೊಂದಿಗೆ ನೈಋತ್ಯಕ್ಕೆ ವಾಲುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.

Karnataka weather forecast
ಹವಾಮಾನ ವರದಿ ಜಿಲ್ಲಾವಾರು.

Weather forecast

ಆಂಧ್ರಪ್ರದೇಶ ಮತ್ತು ಪಕ್ಕದ ಆಂತರಿಕ ಕರ್ನಾಟಕದ ಮೇಲೆ 3.1 ಕಿ.ಮೀನಿಂದ 7.6 ಕಿ.ಮೀವರೆಗೆ ಎತ್ತರದೊಂದಿಗೆ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆಯು ನೈಋತ್ಯ ಕಡೆಗೆ ವಾಲುತ್ತಿದೆ. ಇದರ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ :-HoneyTrap:ಮಾಲೀಕಯ್ಯ ಗುತ್ತೆದಾರ್ ಗೆ ಕಾಂಗ್ರೆಸ್ ನಾಯಕಿ ಹನಿಟ್ರ್ಯಾಪ್‌; 20 ಲಕ್ಷಕ್ಕೆ ಬೇಡಿಕೆಯಿಟ್ಟ ಮಹಿಳೆ ಪೊಲೀಸರ ವಶಕ್ಕೆ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಣ ಹವಾಮಾನವು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಪರಿಣಾಮ ಬೀರಲಿದೆ.

ಇದನ್ನೂ ಓದಿ:-SIRSI :ಮನೆ ಕಳ್ಳತನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ! ಇವರು ಅಂತಿಂತ ಕಳ್ಳರಲ್ಲ!

ಅಕ್ಟೋಬರ್ 30 ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಅಕ್ಟೋಬರ್ 31ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಕೊಪ್ಪಳ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರೆಯುತ್ತದೆ.

ನವೆಂಬರ್ 1ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯ ಇದೆ.

ನವೆಂಬರ್‌ 2ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನವೆಂಬರ್ 3ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಮೇಲೆ ಒಣ ಹವೆ ಮುಂದುವರೆಯಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ಆಕಾಶ ಇರಲಿದೆ.

ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ.

ಮಂಜು ಮುಸುಕಿದ ವಾತಾವರಣ

ಕರಾವಳಿ,ಮಲೆನಾಡು ಭಾಗದಲ್ಲಿ ಒಂದು ವಾರಗಳ ಕಾಲ ಮಂಜು ಮುಸುಕಿನ ವಾತಾವರಣ ಹಾಗೂ ಚಳಿ ಬೀಳಲಿದೆ. ಈ ಮೂಲಕ ವಾತಾವರಣ ಬದಲಾಗಲಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ