ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka|ಹಿರಿಯ ಸಾಹಿತಿ SL Bhyrappa ನಿಧನ 

Renowned Kannada novelist and Padma Bhushan awardee SL Bhyrappa (94) passed away in Bengaluru. Author of Parva, Aavarana, Vamshavruksha & more.'
03:40 PM Sep 24, 2025 IST | ಶುಭಸಾಗರ್
Renowned Kannada novelist and Padma Bhushan awardee SL Bhyrappa (94) passed away in Bengaluru. Author of Parva, Aavarana, Vamshavruksha & more.'
Karnataka|ಹಿರಿಯ ಸಾಹಿತಿ SL Bhyrappa ನಿಧನ 

Karnataka|ಹಿರಿಯ ಸಾಹಿತಿ SL Bhyrappa ನಿಧನ

Karnataka news:- ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು. ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.

Advertisement

ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.

Karnataka|ಶರಾವತಿ ನದಿ ತೀರದಲ್ಲಿ  ಬಾಕ್ಸೈಟ್ ಗಣಿಗಾರಿಕೆಗೆ ಸಿದ್ದತೆ| ಜಿಲ್ಲೆಯಲ್ಲಿ ಯೋಜನೆಗೆ ಹೋಗುತ್ತಿರುವ ಅರಣ್ಯವೆಷ್ಟು ಗೊತ್ತಾ?

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 20-08-1931 ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.

Advertisement

ಕಿತ್ತು ತಿನ್ನುವ ಬಡತನ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿಕೊಂಡರು.

ಅತ್ಯಂತ ಬಡತನದಲ್ಲೇ ಪ್ರೌಢ ಶಿಕ್ಷಣ ಹಾಗೂ ಕಾಲೇಜು ವ್ಯಾಸಂಗವನ್ನು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ "ಸತ್ಯ ಮತ್ತು ಸೌಂದರ್ಯ", ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.

ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. 1961 ರಲ್ಲಿ `ಧರ್ಮಶ್ರೀ' ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ

ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ.

 

Advertisement
Tags :
Bhyrappa novelsFamous Indian author deathKannada literatureKannada novelistKarnataka newsMysuru newsPadma Bhushan writerParva novelSaraswati Samman awardeeSL BhyrappaSL Bhyrappa deathSL Bhyrappa obituaryVamshavruksha author
Advertisement
Next Article
Advertisement