Uttrakannda ಬಿಜೆಪಿ ಯಿಂದ ಮುಖ್ಯಮಂತ್ರಿಗೆ ಹತ್ತು ಪ್ರಶ್ನೆ ? ಏನದು ವಿವರ ನೋಡಿ.
07:54 PM May 01, 2024 IST | ಶುಭಸಾಗರ್


ಕಾರವಾರ :- ಮೇ 3 ರಂದು ಉತ್ತರ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah) ಆಗಮಿಸುತಿದ್ದು ,ಜಿಲ್ಲಾ ಬಿಜೆಪಿ ಮುಖ್ಯಮಂತ್ರಿ ರವರಿಗೆ ಹತ್ತು ಪ್ರಶ್ನೆಗಳನ್ನು ಇಟ್ಟಿದ್ದು , ಜಿಲ್ಲಾ ಬಿಜೆಪಿ ವಕ್ತಾರರಾದ ವಕೀಲ ಸದಾನಂದ ಭಟ್ ಪತ್ರಿಕಾ ಹೇಳಿಕೆ ನೀಡುವ ಮೂಲಕ ಉತ್ತರ ನೀಡುವಂತೆ ಆಗ್ರಹಿಸಿದ್ದಾರೆ. ಹಾಗಿದ್ರೆ ಏನು ಪ್ರಶ್ನೆಗಳು? ಇಲ್ಲಿದೆ ನೋಡಿ.
Advertisement
- ಬರಗಾಲ ಮತ್ತು ನೀರಿನ ಸಮಸ್ಯೆಗೆ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಏನು ಪರಿಹಾರ ಕೊಟ್ಟಿದ್ದೀರಿ? ಬರಗಾಲದಿಂದ ಹಾನಿಗೊಳಗೊಂಡ ರೈತರಿಗೆ ( farmer) ಎಷ್ಟು ಬೆಳೆ ಪರಿಹಾರ ಕೊಟ್ಟಿದ್ದೀರಿ?
- ಈ ಹಿಂದೆ ರಾಜ್ಯ ಬಿಜೆಪಿ ಸರಕಾರ ತನ್ನ ಬಜೆಟ್ (budget )ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಘೋಷಣೆ ಮಾಡಿದ್ದ ಮುಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Hospital) ಮತ್ತು ಪರಿಸರ ವಿಶ್ವವಿದ್ಯಾಲಯ ಸ್ಥಾಪನೆಯನ್ನು ಯಾಕೆ ಕೈ ಬಿಟ್ಟಿದ್ದೀರಿ?
- ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಎಷ್ಟು ಹೊಸ ಅನುದಾನವನ್ನು ನೀಡಿದ್ದೀರಿ?
- ಹಿಂದೂ(Hindu) ಅಮಾಯಕ ಕಾರ್ಯಕರ್ತರ ಮೇಲೆ ಅನವಶ್ಯಕವಾಗಿ ರಾಜಕೀಯ ಪ್ರೇರಿತವಾಗಿ ಪ್ರಕರಣಗಳನ್ನು ಏಕೆ ದಾಖಲಿಸುತ್ತಿದ್ದೀರಿ?
- ರೈತರಿಗೆ ( farmer) ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಿ ಹೈನುಗಾರಿಕೆ ಪ್ರೋತ್ಸಾಹ ಧನಕ್ಕೆ ಯಾಕೆ ಅನುದಾನ ನೀಡುತ್ತಿಲ್ಲ?
- ಜಿಲ್ಲೆಯ ಜ್ವಲಂತ ಸಮಸ್ಯೆಯಾದ ಅರಣ್ಯ ಅತಿಕ್ರಮಣದಾರರ ಹಿತ ರಕ್ಷಣೆಗಾಗಿ ಯಾವ ಕ್ರಮವನ್ನು ಕೈಗೊಂಡಿದ್ದೀರಿ?.
- ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆಗಾಲದಲ್ಲಿ ಉಂಟಾಗುತ್ತಿರುವ ನೆರೆಯ ಅನಾನುಕೂಲತೆಯನ್ನು ತಪ್ಪಿಸಲು, ಪರಿಹಾರಕ್ಕೆ ಏನು ಕ್ರಮವನ್ನು ಕೈಗೊಂಡಿದ್ದೀರಿ?.
- ವಿದ್ಯುತ್, ನೀರು, ಬಸ್, ನೊಂದಣಿ, ವಾಹನ ತೆರಿಗೆ ಇನ್ನಿತರ ದರವನ್ನು ಹೆಚ್ಚಿಸಿ ಎಲ್ಲಾ ಬೆಲೆ ಏರಿಕೆ ಮಾಡಿ ನಿಮ್ಮ ಗ್ಯಾರಂಟಿಗಾಗಿ ಸಂಗ್ರಹಿಸುತ್ತಿರುವ ಹೆಚ್ಚಿನ ಹಣ ಏನು ಮಾಡಿದಿರಿ?.
- ಮೀನುಗಾರರ ಹಿತ ರಕ್ಷಣೆಗೆ ಮತ್ತು ಅನುಕೂಲಕ್ಕೆ ಯಾವ ರೀತಿಯ ಕ್ರಮ ಕೈಗೊಂಡಿದ್ದೀರಿ?.
- ಕೇವಲ ಕಾಂಗ್ರೆಸ್ಸಿನ ಗ್ಯಾರಂಟಿಯಿಂದಲೇ ಜನರು ತಮ್ಮ ಜೀವನವನ್ನು ಮಾಡುತ್ತಿದ್ದಾರೆ ಎನ್ನುವ ರೀತಿಯಲ್ಲಿ ಬಿಂಬಿಸಿಕೊಳ್ಳುತ್ತಿರುವ ನಿಮ್ಮ ಆಡಳಿತದ ಅವಧಿಯಲ್ಲಿ ಮಹಿಳೆಯರ ರಕ್ಷಣೆಗೆ ಯಾವ ಗ್ಯಾರಂಟಿ ನೀಡಿದ್ದೀರಿ?

ಉತ್ತರ ಕನ್ನಡ ಜಿಲ್ಲೆಯ ಜನ ನಿಮ್ಮಿಂದ ಈ ಪ್ರಶ್ನೆಗಳಿಗೆ ಉತ್ತರವನ್ನು ನೀಡುತ್ತಿರುತ್ತದೆ ಜನತೆಯ ಪರವಾಗಿ ಕೇಳಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸಮರ್ಪಕವಾದ ಉತ್ತರವನ್ನು ನೀಡಲಿ ಎಂದು ಸದಾನಂದ ಭಟ್ ಪ್ರಕಟಣೆಯಲ್ಲಿ ಕೋರಿದ್ದಾರೆ
Advertisement