Weather report: ಹವಾಮಾನ ವರದಿ-ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ಆರ್ಭಟ ಮುಂದುವರಿಕೆ.
Weather report: ಹವಾಮಾನ ವರದಿ-ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ಆರ್ಭಟ ಮುಂದುವರಿಕೆ.
ರಾಜ್ಯದಲ್ಲಿ ಮೇ 26ರ ರವರಿಗೆ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ,(udupi) ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಇಂದಿನಿಂದ ಮೇ 28ರ ವರೆಗೆ ಶಿವಮೊಗ್ಗ (shivamogga) ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಿಗೂ ಗರಿಷ್ಠ 200 ಮಿಲಿ ಮೀಟರ್‌ವರೆಗೆ ಮಳೆ ಬರುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.
ಉಳಿದಂತೆ ಬೇರೆ ಬೇರೆ ಭಾಗಗಳಲ್ಲಿ ಅಷ್ಟು ಮಳೆ ಬಾರದು. ಸಾಧಾರಣದಿಂದ ಭಾರೀ ಮಳೆ ಬರಲಿದೆ.

ಭಾರೀ ಮಳೆ ಬೀಳುವ ಜಿಲ್ಲೆಗಳು
ಪೂರ್ವ ಮುಂಗಾರಿನ ಅಬ್ಬರ ಕೊಂಚ ಕಡಿಮೆ ಆದಂತೆ ಕಾಣುತ್ತಿದೆ. ಈ ಕಾರಣದಿಂದಲೇ ಉತ್ತರ ಕರ್ನಾಟಕ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ.
ಇಂದಿನಿಂದ ಮುಂದಿನ ಐದು ದಿನಗಳ ಕಾಲ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಆಗಲಿದೆ.

ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಹಾವೇರಿ, ತುಮಕೂರು, ಬೆಂಗಳೂರು ನಗರ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಜೋರು ಮಳೆ ಬರಲಿದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ:-Karnataka: ಕರಾವಳಿ ಬಂದರಿನಿಂದ ಹೊರಟ ಸರಕು ಸಾಗಾಟ ಹಡಗು ಮುಳುಗಡೆ- 6 ಜನರ ರಕ್ಷಣೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಹೊನ್ನಾವರದ ಖರ್ವ ದಲ್ಲಿ ಅತ್ಯಧಿಕ 56 ಮಿ.ಮೀಟರ್ ಮಳೆ ಸುರಿದಿದೆ.
ನಿನ್ನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಎಲ್ಲಿ ಎಷ್ಟು ಮಳೆ.
