ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Uttara kannada:ಭೂಕುಸಿತ, ಕಡಲು ಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಇಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು
01:38 PM Jul 22, 2025 IST | ಶುಭಸಾಗರ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಇಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಭೂಕುಸಿತ, ಕಡಲು ಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ

Advertisement

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಇಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು .

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಭೂಕುಸಿತ, ಕಡಲು ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದರು.

ಇದನ್ನೂ ಓದಿ:- Kumta:ದೊಡ್ಮನೆ ಘಟ್ಟದಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ: ಕುಮಟಾ-ಸಿದ್ದಾಪುರ ಮಾರ್ಗದ ಸಂಚಾರ ತಾತ್ಕಾಲಿಕ ಬಂದ್

Advertisement

ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ತಡೆಗೋಡೆ ನಿರ್ಮಿಸುವ ಕೆಲಸ ನಡೆಯಬೇಕಿದೆ. ಇದಕ್ಕಾಗಿ 500 ಕೋಟಿ ಮೀಸಲಿಡಲಾಗುತ್ತಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ಪ್ರತಿ ಜಿಲ್ಲೆಗೆ  ನೂರು ಕೋಟಿಯಂತೆ  300 ಕೋಟಿ ಒದಗಿಸಲಾಗುವುದು,ತಡೆಗೋಡೆ ನಿರ್ಮಾಣ ಸೇರಿದಂತೆ ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದ ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ತಡೆಗೋಡೆ  ಹಾಗೂ ಪ್ರಕೃತಿ ವಿಕೋಪದ ಕಾಮಗಾರಿ ನಡೆಸಲು ವಿಳಂಬವಾಗಿದೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿನ 136 ಕ್ಕೂ ಹೆಚ್ಚು ಮಳೆಮಾಪನ ಯಂತ್ರಗಳು ಹಾಳಾಗಿದೆ. ರಾಜ್ಯದ ಸುಮಾರು 1,500 ಸ್ಥಳಗಳಲ್ಲಿ ಮಳೆ ಮಾಪನ ಕೇಂದ್ರಗಳು ದುಸ್ಥಿತಿಯಲ್ಲಿವೆ. ಅವುಗಳನ್ನು ದುರಸ್ತಿ ಮಾಡಿಸುವ ಕೆಲಸ ನಡೆಯಲಿದೆ. ಯಂತ್ರಗಳು ಸಂಪೂರ್ಣ ಹಾಳಾಗಿದ್ದರೆ ಹೊಸ ಯಂತ್ರಗಳ ಅಳವಡಿಕೆ ನಡೆಯಲಿದೆ ಎಂದರು.

ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡಲಾಗುತ್ತಿದೆ. ಜನರಿಗೆ ದಾಖಲೆಗಳು ಸುಲಭವಾಗಿ ಸಿಗುವಂತೆ ಮಾಡಲಾಗುತ್ತಿದೆ. ಮುಂದಿನ 6 ತಿಂಗಳ ಒಳಗೆ ಎಲ್ಲ ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡುವ ಗುರಿ ಹೊಂದಿದ್ದೇವೆ ಎಂದರು.

ಭೂ ಕುಸಿತ ಪ್ರದೇಶಗಳ ಭೇಟಿ

ಕಂದಾಯ ಸಚಿವರು ಮೊದಲು ಶಿರಸಿ ತಾಲ್ಲೂಕಿನ ಬೆಣ್ಣೆಹೊಳೆ ಸೇತುವೆ, ಭೂಕುಸಿತ ಸಂಭವಿಸಿರುವ ಕುಮಟಾ ತಾಲ್ಲೂಕಿನ ದೇವಿಮನೆ ಘಟ್ಟ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ದೇವಿಮನೆ ಘಟ್ಟದಲ್ಲಿ ತಡೆಗೋಡೆ ನಿರ್ಮಿಸದೆ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕೆ ಆರ್.ಎನ್.ಎಸ್ ಇನ್‌ಫ್ರಾಸ್ಟ್ರಕ್ಟರ್ ಕಂಪನಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ ಉಪಸ್ಥಿತರಿದ್ದರು.

Advertisement
Tags :
Karnataka newskimtakrishnabairegowdaLandslideNewsUttara Kannada
Advertisement
Next Article
Advertisement