ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Mangalore : ನಡು ರಸ್ತೆಯಲ್ಲೇ ಹಿಂದೂ ಕಾರ್ಯಕರ್ತನ ಹ**

ಮಂಗಳೂರು:- ಮಂಗಳೂರಿನಲ್ಲಿ (Mangalore) ಹಿಂದೂ ಕಾರ್ಯಕರ್ತ ರೌಡಿ ಶೀಟರ್ ಮೇಲೆ ತಲವಾರು ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಸುಹಾಅ್ ಶಟ್ಟಿ ಹತ್ಯೆಯಾದವನಾಗಿದ್ದು ಸುರತ್ಕಲ್
10:58 PM May 01, 2025 IST | ಶುಭಸಾಗರ್

Mangalore : ನಡು ರಸ್ತೆಯಲ್ಲೇ ಹಿಂದೂ ಕಾರ್ಯಕರ್ತನ ಹ**

Advertisement

ಫೋಟೋ ಮೇಲೆ ಕ್ಲಿಕ್ ಮಾಡಿ ನಮ್ಮ WhatsApp ಗ್ರೂಪ್ ಗೆ join ಆಗಿ. https://chat.whatsapp.com/F3HVC4z4xJr1Hbm5p2PkB1

ಮಂಗಳೂರು:- ಮಂಗಳೂರಿನಲ್ಲಿ (Mangalore) ಹಿಂದೂ ಕಾರ್ಯಕರ್ತ ರೌಡಿ ಶೀಟರ್ ಮೇಲೆ ತಲವಾರು ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.

ಸುಹಾಅ್ ಶಟ್ಟಿ ಹತ್ಯೆಯಾದವನಾಗಿದ್ದು ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದನು.

ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ತಲವಾರ್ ನಿಂದ ಭೀಕರ ಹಲ್ಲೆ ಮಾಡಲಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವು ಕಂಡಿದ್ದಾನೆ.

Advertisement

2022ರ ಜುಲೈ 28ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಫಾಜಿಲ್ ಹತ್ಯೆ ಪ್ರಕರಣದಲ್ಲಿ ಮೃತ ಸುಹಾಸ್ ಶಟ್ಟಿ ಪ್ರಮುಖ ಆರೋಪಿಯಾಗಿದ್ದನು.

ಸುಹಾಸ್‌ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು,ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಈತನಿಗೆ ಇರಲಿಲ್ಲ. ಇದಲ್ಲದೇ ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದನು.
ಘಟನೆ ಸಂಬಂಧ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸುಹಾಸ್ ಶಟ್ಟಿ ಮೇಲೆ ದಾಳಿ ಮಾಡಿರುವುದು

ಘಟನೆ ಆಗಿದ್ದು ಹೇಗೆ?

ಇನೋವಾ ಕಾರಿನಲ್ಲಿ ಸ್ನೇಹಿತರೊಂದಿಗೆ ಬರುತ್ತಿದ್ದ ಸುಹಾಸ್ ಶೆಟ್ಟಿ ಕಾರಿಗೆ ಹಿಂದಿನಿಂದ ಹಿಂಬಾಲಿಸಿಕೊಂಡು ಬಂದಿದ್ದ ಮೀನಿನ ಟೆಂಪೋ ಡಿಕ್ಕಿ ಹೊಡೆದಿದೆ. ಶಿಫ್ಟ ಕಾರಿನಲ್ಲಿ ಇದ್ದ ದುಷ್ಕರ್ಮಿಗಳು ಸುಹಾಸ್ ಶೆಟ್ಟಿ ಮೇಲೆ ಬರ್ಬರ ಹಲ್ಲೆ ನಡೆಸಿದ್ದಾರೆ.ಸಾರ್ವಜನಿಕ ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ದುರದೃಷ್ಟ ವಶಾತ್ ಮಂಗಳೂರಿನ ಆಸ್ಪತ್ರೆಯಲ್ಲಿ ಸುಹಾಸ್ ಕೊನೆಯುಸಿರೆಳೆದಿದ್ದಾನೆ.

Advertisement
Tags :
AttackCrimeMangalurNewsPoliceshuhas shatty
Advertisement
Next Article
Advertisement