ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

ವಾಹನ ಸವಾರರಿಗೆ ಗುಡ್ ನ್ಯೂಸ್|ದಂಡದ ಮೊತ್ತದಲ್ಲಿ 50% ಡಿಸ್ಕೊಂಟ್ ಯಾರಿಗೆಲ್ಲ ಉಪಯೋಗ ಇಲ್ಲಿದೆ ನೋಡಿ.

ಕಾರವಾರ, ಆಗಸ್ಟ್ 21:-ಪೊಲೀಸ್ ಇಲಾಖೆಯಲ್ಲಿ  ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ (police)ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.
10:08 PM Aug 21, 2025 IST | ಶುಭಸಾಗರ್
ಕಾರವಾರ, ಆಗಸ್ಟ್ 21:-ಪೊಲೀಸ್ ಇಲಾಖೆಯಲ್ಲಿ  ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ (police)ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ

Advertisement

ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ

ಕಾರವಾರ, ಆಗಸ್ಟ್ 21:-ಪೊಲೀಸ್ ಇಲಾಖೆಯಲ್ಲಿ  ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ (police)ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

Advertisement

ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Advertisement
Tags :
discountGood NewsKarnatakaNewstraffic fune
Advertisement
Next Article
Advertisement