ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka:ರಾಜ್ಯದ ಹಲವು ಕಡೆ ಮಳೆ ಎಚ್ಚರಿಕೆ -ಎಲ್ಲೆಲ್ಲಿ ಮಳೆ ವಿವರ ನೋಡಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಿವ (Rain) ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
10:23 AM May 03, 2025 IST | ಶುಭಸಾಗರ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಿವ (Rain) ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಮೇ 7ರವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ. ವಿವಿಧೆಡೆ ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್‌ (Yellow Alert) ಘೋಷಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಮಿಂಚು, ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ :-Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 6 ರವರೆಗೆ ಮಳೆ ಎಚ್ಚರಿಕೆ

Advertisement

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗು ಯಲ್ಲೋ ಅಲರ್ಟ್‌ (Yellow Alert) ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆ ನಂತರ ಮೋಡ ಕವಿದ ವಾತಾವರಣ ಇರಲಿದ್ದು ಚದುರಿದ ಮಳೆಯಾಗಲಿದೆ.

ಯಾವ ಜಿಲ್ಲೆಯಲ್ಲಿ ಮಳೆ ವಿವರ ಈ ಕೆಳಗಿನಂತಿದೆ.

Advertisement
Tags :
KarnatakaNewsRain Alartweather reportಕರ್ನಾಟಕಹವಾಮಾನ ವರದಿ
Advertisement
Next Article
Advertisement