Yallapur:ಯಲ್ಲಾಪುರ ಬೇಡ್ತಿ ನದಿಯ ಹಳ್ಳದಲ್ಲಿ ಕೊಚ್ಚಿಹೋದ ಸಹೋದರರು
Yallapur:ಯಲ್ಲಾಪುರ ಬೇಡ್ತಿ ನದಿಯ ಹಳ್ಳದಲ್ಲಿ ಕೊಚ್ಚಿಹೋದ ಸಹೋದರರು.
ಕಾರವಾರ :- ಅಬ್ಬರದ ಮಳೆಗೆ(Rain) ಏಕಾ ಏಕಿ ಹಳ್ಳದಲ್ಲಿ ನೀರು ಬಂದು ಸಹೋದರರಿಬ್ಬರು ಕೊಚ್ಚಿಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(yallapur) ತಾಲೂಕಿನ ಮಾದನಸರ ಗ್ರಾಮದ ಕವಲಗಿ ಹಳ್ಳದಲ್ಲಿ ನಡೆದಿದೆ.
ರಫೀಕ್ ಇಬ್ರಾಹಿಂ ಸಾಬ್ ಸಯ್ಯದ್(27), ಹನೀಫ್ ಇಬ್ರಾಹಿಂ ಸಾಬ್ ಸಯ್ಯದ್(25) ಹಳ್ಳದಲ್ಲಿ ಕೊಚ್ಚಿಹೋದ ಯುವಕರಾಗಿದ್ದಾರೆ.ಎಂಟು ಜನ ಯುವಕರು ಮೀನುಹಿಡಿಯಲು ಕವಲಗಿ ಹಳ್ಳ ದಾಟಿ ಬೇಡ್ತಿ ನದಿ ಬಳಿ ಹೋಗಿದ್ದರು.
ಮೀನು ಹುಡಿದು ಸಂಜೆ ಮರಳುವಾಗ ಕವಲಗಿ ಹಳ್ಳಕ್ಕೆ ಏಕಾ ಏಕಿ ನೀರು ನುಗ್ಗಿದ್ದು ಈ ಸಂದರ್ಭದಲ್ಲಿ ಹಳ್ಳ ದಾಟುತಿದ್ದ ಒಂದೇ ಕುಟುಂಬದ ಇಬ್ಬರು ಸಹೋದರರು ಕೊಚ್ಚಿಹೋಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಇದನ್ನೂ ಓದಿ:-Yallapur:ಅಡುಗೆ ಮಾಡಲು ಮನೆಯಲ್ಲಿ ಸಾಮಗ್ರಿಗಳಿಲ್ಲ,ತುತ್ತು ಅನ್ನ ಸಿಗದೇ ಮನನೊಂದ ಬುಡಕಟ್ಟು ಜನಾಂಗದ ಮಹಿಳೆ ಆತ್ಮಹತ್ಯೆ
ಶರಾವತಿ ನದಿ ಪಾತ್ರದಲ್ಲಿ ಅಬ್ಬರದ ಮಳೆಗೆ ಹೆಚ್ಚಿನ ನೀರು- ಆಣೆಕಟ್ಟಿನಿಂದ ಯಾವುದೇ ಸಂದರ್ಭದಲ್ಲಿ ನೀರು ಬಿಡುವ ಎಚ್ಚರಿಕೆ ನೀಡಿದ ಕೆಪಿಸಿ.
ಕಾರವಾರ :-ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಶರಾವತಿ ಜಲಾನಯನ ಪ್ರದೇಶದಲ್ಲಿ ಗಣನೀಯವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ, ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರಿಕೆಯಾಗುತ್ತಿದೆ.
ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಇಂದು ಬೆಳಗ್ಗೆ 08.00 ಘಂಟೆಗೆ ಜಲಾಶಯದ ನೀರಿನ ಮಟ್ಟವು 1811.95 (85.05%) ಅಡಿಗಳಿಗೆ ತಲುಪಿರುತ್ತದೆ.
ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 11,200 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆ. ಅದರಂತೆ, ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆ ಪಿ ಸಿ ಲಿಂಗನಮಕ್ಕಿ ರವರು ಸಾರ್ವಜನಿಕ ಪ್ರಕಟಣೆ ನೀಡಿದೆ.
ಈ ಕಾರಣದಿಂದ ಲಿಂಗನಮಕ್ಕಿ ಜಲಾಶಯದ ತಗ್ಗು ಪ್ರದೇಶದ (ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ) ಶರಾವತಿ ನದಿಯ ಇಕ್ಕೆಲಗಳ ಪ್ರದೇಶದಲ್ಲಿರುವ ತಳಮಟ್ಟದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು, ನದಿ ಪಾತ್ರದ ವ್ಯಾಪ್ತಿಯ ಪ್ರವಾಹ ಸಂಭವನೀಯ ಸ್ಥಳಗಳ ಸಾರ್ವಜನಿಕರು ತಮ್ಮ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯಬೇಕು ,ಶರಾವತಿ ನದಿಯ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರ ಕುರಿತು ಕಾಳಜಿ ಕೇಂದ್ರಗಳನ್ನು ಅಣಿಗೊಳಿಸಿದ್ದು ತಕ್ಷಣದಲ್ಲೇ ತೆರಳಲು ಸೂಚಿಸಲಾಗಿದ್ದು ,ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಅಥವಾ ಅದರ ಸುತ್ತಲಿನ ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಲು ತಿಳಿಸಿದೆ.