Rain news |ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಇನ್ನು ಎಷ್ಟು ದಿನ ಮಳೆ ಬೀಳಲಿದೆ ಗೊತ್ತಾ?
Rain news |ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಇನ್ನು ಎಷ್ಟು ದಿನ ಮಳೆ ಬೀಳಲಿದೆ ಗೊತ್ತಾ?
Karnataka rain :- ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಅಕ್ಟೊಬರ್ 2 ರ ವರೆಗೆ ಮಳೆ ಬೀಳುವ ಎಚ್ಚರಿಕೆಯನ್ನು (ಯೆಲ್ಲೋ ಅಲರ್ಟ) ನೀಡಿದೆ.
ಆದ್ದರಿಂದ ಈ ಅವಧಿಯಲ್ಲಿ, ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು, ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು. . ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಮತ್ತು
ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು. ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು ಎಂದು ಉತ್ತರ ಕನ್ನಡ ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನ ಮಳೆ ವಿವರ.
ಇನ್ನು ಕರಾವಳಿ ಭಾಗದಲ್ಲಿ ಅಲ್ಲದೇ ಶಿವಮೊಗ್ಗ ,ಚಿಕ್ಕಮಂಗಳೂರು ಸೇರಿದಂತೆ ಹಲವು ಭಾಗದಲ್ಲಿ ಮಳೆ ಮುಂದುವರೆಯಲಿದೆ.
Heavy rain; ಸಿದ್ದಾಪುರದ -ಕುಮಟಾ ಹೆದ್ದಾರಿಯಲ್ಲಿ ಸಂಚರಿಸುವವರೇ ಈ ಸುದ್ದಿ ಓದಿ
ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.