For the best experience, open
https://m.kannadavani.news
on your mobile browser.
Advertisement

Ranveer Singh|ಕೊನೆಗೂ ದೈವದ ಅನುಕರಣೆಗೆ ಕ್ಷಮೆಯಾಚಿಸಿದ ನಟ ರಣವೀರ್ 

Ranveer Singh issues a public apology after facing backlash for mimicking a Tulu Nadu Daiva during his appreciation of Rishab Shetty’s performance at IFFI Goa
02:44 PM Dec 02, 2025 IST | ಶುಭಸಾಗರ್
Ranveer Singh issues a public apology after facing backlash for mimicking a Tulu Nadu Daiva during his appreciation of Rishab Shetty’s performance at IFFI Goa
ranveer singh ಕೊನೆಗೂ ದೈವದ ಅನುಕರಣೆಗೆ ಕ್ಷಮೆಯಾಚಿಸಿದ ನಟ ರಣವೀರ್ 

Ranveer Singh|ಕೊನೆಗೂ ದೈವದ ಅನುಕರಣೆಗೆ ಕ್ಷಮೆಯಾಚಿಸಿದ ನಟ ರಣವೀರ್ 

Advertisement

ಮುಂಬೈ :-ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ (Rishab Shetty)ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಕ್ಷಮೆಯಾಚಿಸಿದ್ದಾರೆ.

ranveer-singh-apology-tulu-daiva-imitation-controversy
ರಣವೀರ್ ಕ್ಷಮೆ ಕೇಳಿರುವ ಸಂದೇಶ

ಈ ಕುರಿತು ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. `ಕಾಂತಾರ ಚಾಪ್ಟರ್ 1′ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು. ಅವರ ನಟನೆಗೆ ಅಪಾರ ಮೆಚ್ಚುಗೆಯಿದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಹಾಗೂ ನಂಬಿಕೆಯನ್ನು ನಾನು ಗೌರವಿಸುತ್ತೇನೆ. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ. ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Karnataka| ಕುರ್ಚಿಗಾಗಿ ಏಳೆಂಟು ಜನರ ಪೈಪೋಟಿ,ಶಾಸಕ,ಮಂತ್ರಿಗಳೂ ರೇಸ್ ನಲ್ಲಿ! ವಿಜಯೇಂದ್ರ ಏನಂದ್ರು ಗೊತ್ತಾ?

ಈ ಸಂಬಂಧ ಹಿಂದೂ ಜನಜಾಗೃತಿ ಸಮಿತಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದೆ. ಸಮುದಾಯ ಆರಾಧಿಸುವ ಚಾಮುಂಡಿದೇವಿಯನ್ನು ಹೆಣ್ಣು ದೆವ್ವ ಎಂದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಗೋವಾದಲ್ಲಿ ನಡೆದಿದ್ದೇನು?

ಗೋವಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಟನೆಯನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಅಪಹಾಸ್ಯ ಮಾಡಿದ್ದರು. ಇದರ ಬೆನ್ನಲ್ಲೇ ತುಳುನಾಡಿನ ದೈವಕ್ಕೆ ರಣವೀರ್ ಸಿಂಗ್ ಅಪಮಾನ ಮಾಡಿದ್ದಾರೆಂದು ಸೋಷಿಯಲ್ ಮೀಡಿಯಾ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ರಿಷಬ್ ಅವರ ಕಾಂತಾರ ಸಿನಿಮಾವನ್ನು ಥಿಯೇಟರ್‌ನಲ್ಲಿ ನೋಡಿದ್ದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್ ಸಿಂಗ್ ಅನುಕರಣೆ ಮಾಡಿದ್ದರು. ಅನುಕರಣೆ ಮಾಡಿದ್ದಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು. ಕಾರ್ಯಕ್ರಮ ನಡೆಯುವಾಗ ರಿಷಬ್ ಶೆಟ್ಟಿ ಮುಂದಿನ ಸಾಲಿನಲ್ಲೇ ಕುಳಿತಿದ್ದರು. ರಣವೀರ್ ಅನುಕರಣೆಗೆ ಸ್ವತಃ ರಿಷಬ್ ಅವರೇ ನಕ್ಕಿದ್ದಾರೆ ಎನ್ನಲಾಗಿತ್ತು. ಆದರೆ ರಿಷಬ್ ಬೇರೆ ಸಂದರ್ಭದಲ್ಲಿ ನಕ್ಕಿದ್ದನ್ನು ಈ ಸಂದರ್ಭಕ್ಕೆ ಸೇರಿಸಿ, ಎಡಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ