ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karnataka|ಕನ್ನಡ ಚಿತ್ರರಂಗದ ಹಾಸ್ಯ ನಟ‌ ಎಂ.ಎಸ್‌ ಉಮೇಶ್ ಇನ್ನಿಲ್ಲ

Karnataka:-Kannada film and theatre veteran M.S. Umesh passed away at Bengaluru’s Kidwai Hospital after battling cancer. The senior Sandalwood actor, known for his iconic comedy roles, was recently hospitalized after a fall.
11:54 AM Nov 30, 2025 IST | ಶುಭಸಾಗರ್
Karnataka:-Kannada film and theatre veteran M.S. Umesh passed away at Bengaluru’s Kidwai Hospital after battling cancer. The senior Sandalwood actor, known for his iconic comedy roles, was recently hospitalized after a fall.

Karnataka|ಕನ್ನಡ ಚಿತ್ರರಂಗದ ಹಾಸ್ಯ ನಟ‌ ಎಂ.ಎಸ್‌ ಉಮೇಶ್ ಇನ್ನಿಲ್ಲ.

ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟ ಎಂ.ಎಸ್ ಉಮೇಶ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

Advertisement

ಕೆಲ ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಜಾರಿಬಿದ್ದಿದ್ದ ಉಮೇಶ್‌ ಕಾಲು ಮತ್ತು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದರು. ತಕ್ಷಣವೇ ಅವರನ್ನ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುವಾಗ ಅವರಿಗೆ ಕ್ಯಾನ್ಸರ್‌ ಇರೋದು ಪತ್ತೆಯಾಗಿತ್ತು. ಕಾಲಿಗೆ ಸರ್ಜರಿ ಮಾಡುವಾಗ ಅವರಿಗೆ ಲಿವರ್ ಕ್ಯಾನ್ಸರ್ ಇರುವ ಬಗ್ಗೆಯೂ ವೈದ್ಯರು ಮಾಹಿತಿ ನೀಡಿದರು. ಹೀಗಾಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್‌ ಅವರಿಂದು ಇಹಲೋಕ ತ್ಯಜಿಸಿದ್ದಾರೆ.

Kannada actor| ಹಾಸ್ಯ ನಟ ಉಮೇಶ್ ಗೆ ಶಾಕ್ ನೀಡಿತು ವೈದ್ಯರ ವರದಿ! ಅಷ್ಟಕ್ಕೂ ಆಗಿದ್ದೇನು ಗೊತ್ತಾ?

ಜೆಪಿ ನಗರದ ಅವರ ಮನೆಯಲ್ಲಿ 12 ಗಂಟೆ ವರೆಗೆ ಪಾರ್ಥೀವ ಶರೀರ ಇರಿಸಲಾಗುತ್ತದೆ. ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗುತ್ತೆ. ನಂತರ ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

Advertisement

ಮೃತದೇಹ ರವಾನೆ ಚಿತ್ರ

ನಟ ಉಮೇಶ್ ರಂಗ ಹೆಜ್ಜೆ.

1945ರ ಏಪ್ರಿಲ್‌ 22ರಂದು ಮೈಸೂರಿನಲ್ಲಿ ಜನಿಸಿದ ಉಮೇಶ್‌ ಅವರು ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರು. ʻಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ…..ʼ ʻಹೇಳ್ಕೊಳ್ಳೋಣ ಅಂದ್ರೆ ನನ್‌ಹೆಂಡ್ತಿ ಕೂಡಾ ಊರಲ್ಲಿಲ್ವೆ..ʼ ಹೀಗೆ ತಮ್ಮ ಅಸಾಮಾನ್ಯ ರೀತಿಯ ಸಂಭಾಷಣೆ, ಅಭಿನಯ, ಅಭಿವ್ಯಕ್ತಿಗಳಿಂದ ಕನ್ನಡ ಚಿತ್ರರಸಿಕರ ಮನ ಗೆದ್ದವರು ಎಂ.ಎಸ್ ಉಮೇಶ್.

ಹುಟ್ಟಿನಿಂದಲೇ ರಂಗಭೂಮಿ ನಂಟು.

ಉಮೇಶ್‌ ಅವರ ತಂದೆ ಎ.ಎಲ್ ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ ಹುಟ್ಟಿನಿಂದಲೇ ಬಂತು. ಬಾಲ ಪಾತ್ರಗಳಲ್ಲಿ ತನ್ಮಯತೆಯಿಂದ ಅಭಿನಯಿಸಿದವರು ಉಮೇಶ್. ದೃಶ್ಯಕ್ಕೆ ತಕ್ಕಂತೆ ಮೂಡ್ ಬರಿಸಲು ಕಲ್ಲು ಸಕ್ಕರೆ ಆಸೆ ತೋರಿಸಿ ಬಾಲಪಾತ್ರಗಳಲ್ಲಿ ಅವರಿಗೆ ಅಭಿನಯಿಸಲು ಪ್ರಚೋದನೆ ನೀಡಲಾಗುತ್ತಿತ್ತಂತೆ.

10 ರೂಪಾಯಿ ಬಹುಮಾನ ಪ್ರಸಂಗ.

ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರ ಉಮೇಶ್ ಅವರಿಗೆ ಬುದ್ಧಿ ಬಂದ ನಂತರದ ಮೊದಲ ಅನುಭವದ ಪಾತ್ರ. ಇದಕ್ಕೆ ಮೊದಲೇ ಅವರು ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರವಹಿಸಿದ್ದರು. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ಅವರಿಗೆ ಬಾಲನಟನ ಪಾತ್ರಗಳು ದೊರಕಿದವು. ದಶಾವತಾರ ನಾಟಕದಲ್ಲಿ ಇವರ ಪ್ರಹ್ಲಾದನ ಪಾತ್ರದ ಅಭಿನಯವನ್ನು ಮೆಚ್ಚಿದ ಮಾಸ್ತಿಯವರು ಹತ್ತು ರೂಪಾಯಿ ಸಂಭಾವನೆ ನೀಡಿದ್ದರು. ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು. ಎಂ.ಸಿ.ಮಹಾದೇವ ಸ್ವಾಮಿಯವರ ಕನ್ನಡ ಥಿಯೇಟರ್ಸ್ ಕಂಪನಿಯಲ್ಲೂ ಉಮೇಶ್ ಬಾಲನಟನಾಗಿ ಪಾತ್ರವಹಿಸಿದ್ದರು. ಉಮೇಶರಿಗೆ ನಟನೆಯ ಜೊತೆಗೆ ಹಲವಾರು ವಾದನ ಕಲೆಗಳೂ ಕರಗತವಾಗಿವೆ. ಮಾಸ್ಟರ್‌ ಹಿರಣ್ಣಯ್ಯನವರ ಕಂಪನಿಯಲ್ಲಿ ಪಿಯಾನೋ ವಾದಕರಾಗಿ, ಕುಂಚಕಲಾವಿದರಾಗಿ, ಎನ್. ಶ್ರೀಕಂಠ ಮೂರ್ತಿಗಳ ನಾಟಕ ಕಂಪನಿಯಲ್ಲಿ ಹಾರ್ಮೋನಿಯಂ ವಾದಕರಾಗಿ ಉಮೇಶ್ ಖ್ಯಾತಿ ಗಳಿಸಿದ್ದರು. ಅವರು ಹಾಡಬಲ್ಲವರು ಕೂಡಾ.

ʻಕಥಾಸಂಗಮದʼ ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ ‘ತಿಮ್ಮರಾಯಿ’ ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, 1994ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, 1997ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶರನ್ನ ಅರಸಿಬಂದಿವೆ. ಉಮೇಶರ 5 ದಶಕಗಳ ಚಿತ್ರರಂಗದಲ್ಲಿನ ಕಾಯಕವನ್ನು ಚಿತ್ರರಂಗವು ಗೌರವಿಸಿತು.

 

Advertisement
Tags :
BengaluruCancerKannada ActorKannada cinemaKarnataka newsMS UmeshRavindra KalakshetraSandalwoodSandalwood newsTheatre ArtistVeteran Actor
Advertisement
Next Article
Advertisement