Lokayukta - ಲಂಚ ಸ್ವೀಕರಿಸಿದ DYSP ಲೋಕಾಯುಕ್ತ ಬಲೆಗೆ
Lokayukta - ಲಂಚ ಸ್ವೀಕರಿಸಿದ DYSP ಲೋಕಾಯುಕ್ತ ಬಲೆಗೆ.
ಶಿವಮೊಗ್ಗ shivamoga:- ಸಿಬ್ಬಂದಿಯೋರ್ವರಿಂದ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ (DAR) ಡಿವೈಎಸ್ಪಿ ಓರ್ವರನ್ನು, ಲಂಚದ ಹಣದ ಸಮೇತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ಮಾ. 25 ರಂದು ನಡೆದಿದೆ.
ಡಿಎಆರ್ DYSP ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಇವರು ತಮ್ಮ ನಿವಾಸದಲ್ಲಿ ಸಿಬ್ಬಂದಿಯೋರ್ವರಿಂದ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:-Shivamogga ಸದ್ದಿಲ್ಲದೇ ನೆರವೇರಿತು ಸಂಸದ ಬಿ.ವೈ ರಾಘವೇಂದ್ರ ಪುತ್ರನ ನಿಶ್ಚುತಾರ್ಥ – ಯಾರ ಜೊತೆ ಗೊತ್ತಾ?
ಕರ್ತವ್ಯಕ್ಕೆ ನಿಯೋಜನೆ ಮಾಡುವುದಕ್ಕೆ ಸಂಬಂಧಿಸಿದಂತೆ ಡಿಎಆರ್ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಿಬ್ಬಂದಿಯು ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು.
ಮಂಗಳವಾರ ತಮ್ಮ ನಿವಾಸದಲ್ಲಿ ಸಿಬ್ಬಂದಿಯಿಂದ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಲಂಚದ ಹಣದ ಸಮೇತ ಡಿವೈಎಸ್ಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.