ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Shivamogga | ಮಳೆ ಅವಾಂತರ! ಎಲ್ಲಿ ಏನಾಯ್ತು ವಿವರ ಇಲ್ಲಿದೆ.

ಶಿವಮೊಗ್ಗ : ಶಿವಮೊಗ್ಗದಲ್ಲಿ ತುಂಗಾನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಹಳೆ ಸೇತುವೆ ಪಕ್ಕದಲ್ಲಿರುವ ತುಂಗಾನದಿಯ ಮಧ್ಯೆದ ಬಂಡೆ ಮೇಲೆ ಗೋಪಾಲ್‌ (35) ಎಂಬಾತ ಕುಳಿತಿದ್ದ.
09:04 PM Oct 09, 2024 IST | ಶುಭಸಾಗರ್

Shivamogga| ತುಂಗಾನದಿ ಮಧ್ಯದಲ್ಲಿ ಸಿಲುಕಿದ್ದ ವ್ಯಕ್ತಿ ರಕ್ಷಣೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ತುಂಗಾನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಹಳೆ ಸೇತುವೆ ಪಕ್ಕದಲ್ಲಿರುವ ತುಂಗಾನದಿಯ ಮಧ್ಯೆದ ಬಂಡೆ ಮೇಲೆ ಗೋಪಾಲ್‌ (35) ಎಂಬಾತ ಕುಳಿತಿದ್ದ.

Advertisement

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಗೋಪಾಲ್‌ ಕಳೆದ ರಾತ್ರಿ ತುಂಗಾ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ ಮಲಗಿದ್ದ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಎಚ್ಚರವಾದಾಗ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ದಡಕ್ಕೆ ಬರಲಾಗದೆ ಆತಂಕಕ್ಕೀಡಾಗಿದ್ದ.

ಇದನ್ನೂ ಓದಿ:-Arecanut price| ಅಡಿಕೆ ಧಾರಣೆ 09 october 2024

Advertisement

ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.
ಬೆಳಗ್ಗೆ ಹೊತ್ತಿಗೆ ಬೋಟ್‌ ಮೂಲಕ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಗೋಪಾಲ್‌ನನ್ನು ರಕ್ಷಿಸಿದ್ದಾರೆ.

ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಕೊಚ್ಚಿ ಹೋದ ವ್ಯಕ್ತಿ.

ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಬೈಕ್‌ ಸಹಿತ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಮುದುವಾಲದ ಬಳಿ ನಡೆದಿದೆ.

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರನನ್ನು ಚಿನ್ನಿಕಟ್ಟೆ ಗ್ರಾಮದ ಇಕ್ಬಾಲ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೈಕ್‌ ಸವಾರನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶಿವಮೊಗ್ಗ ತಾಲೂಕಿನ ಮುದುವಾಲದ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಮಳೆಗೆ ಹಳ್ಳ ತುಂಬಿ ಹರಿಯುತ್ತಿತ್ತು. ಈ ಸಂದರ್ಭ ಚಿನ್ನಿಕಟ್ಟೆಯ ಇಕ್ಬಾಲ್‌ ಎಂಬುವವರು ಬೈಕ್‌ನಲ್ಲಿ ಹಳ್ಳ ದಾಟುವಾಗ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ.

ಇಕ್ಬಾಲ್‌ ಅವರು ಶಿವಮೊಗ್ಗದಿಂದ ಮುದುವಾಲ ಮಾರ್ಗವಾಗಿ ಚಿನ್ನಿಕಟ್ಟೆಗೆ ತೆರಳುತ್ತಿದ್ದರು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು ಶೋಧ ಕಾರ್ಯ ನಡೆಸಿದ್ದಾರೆ.

ಕುಡಿಯುವ ನೀರು ವ್ಯತ್ಯಯ.

ಶಿವಮೊಗ್ಗ ನಗರದ ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಅ.14 ರಂದು ಕೇಬಲ್ ಚಾಲನೆಗೊಳಿಸುವುದರಿಂದ ಅ.14 ಮತ್ತು 15 ರಂದು ಎರಡು ದಿನಗಳು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement
Tags :
FloodHeavy rainKarnatakaShivamoggaಮಳೆ
Advertisement
Next Article
Advertisement