Hosanagara: ಲಾರಿ ಬಸ್ ಡಿಕ್ಕಿ ಹಲವು ಪ್ರಯಾಣಿಕರಿಗೆ ಗಾಯ
HOSANAGARA NEWS, 12 NOVEMBER 2024 : ಲಾರಿ ಮತ್ತು ಬಸ್ (Bus) ನಡುವೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದ್ದು ,ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ
06:34 PM Nov 12, 2024 IST | ಶುಭಸಾಗರ್
HOSANAGARA NEWS, 12 NOVEMBER 2024 : ಲಾರಿ ಮತ್ತು ಬಸ್ (Bus) ನಡುವೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದ್ದು ,ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
Advertisement
ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ಸಂಭವಿಸಿದ್ದು, ಖಾಸಗಿ ಬಸ್ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿತ್ತು.
ಇದನ್ನೂ ಓದಿ:-Boat Trip: ಮೈ ಮೇಲೆ ಬಟ್ಟೆ ಇಲ್ಲದೆ ಪ್ರವಾಸ ಯಾವಾಗ? ಸಂಪೂರ್ಣ ವಿವರ ಇಲ್ಲಿದೆ
ಲಾರಿ ಹೊಸನಗರದಿಂದ ಹೋಗುವಾಗ ಬಸ್ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ.
ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಪೈಕಿ ಹಲವರು ಗಾಯಗೊಂಡಿದ್ದಾರೆ.
ಕೂಡಲೆ ಅವರಿಗೆ ರಿಪ್ಪನ್‌ಪೇಟೆ (reppanapete) ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement