Shivamogga| ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಬಂದ ಬಿಳಿ ಹುಲಿ-ಯಾವೆಲ್ಲಾ ಪ್ರಾಣಿಗಳು ಬಂದಿವೆ ವಿವರ ಇಲ್ಲಿದೆ.
Shivamogga| ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಬಂದ ಬಿಳಿ ಹುಲಿ-ಯಾವೆಲ್ಲಾ ಪ್ರಾಣಿಗಳು ಬಂದಿವೆ ವಿವರ ಇಲ್ಲಿದೆ.
ಶಿವಮೊಗ್ಗ:ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ವಿವಿಧ ಪ್ರವಾಸಿ ತಾಣಗಳಿವೆ. ಇವುಗಳಲ್ಲಿ ಶಿವಮೊಗ್ಗ ನಗರದ ಹತ್ತಿರವಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಸಹ ಒಂದು. ಪ್ರತಿದಿನ ನೂರಾರು ಜನರು ಇಲ್ಲಿಗೆ ಭೇಟಿ ನೀಡುತ್ತಾರೆ. ದೇಶ-ವಿದೇಶದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು, ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇದೆ.
ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮ ಅತ್ಯಂತ ಪ್ರಮುಖ ಪ್ರವಾಸಿ ತಾಣವಾಗಿದ್ದು, ಮೈಸೂರು, ಬನ್ನೇರುಘಟ್ಟದ ನಂತರ ಶಿವಮೊಗ್ಗದ ಹುಲಿ ಮತ್ತು ಸಿಂಹಧಾಮ ರಾಜ್ಯದಲ್ಲಿ ಹೆಸರುವಾಸಿಯಾಗಿದೆ. ಈ ಮೃಗಾಲಯವನ್ನು ಅರಣ್ಯದ ನಡುವೆ 250 ಹೆಕ್ಟೇರ್ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.
ಆದ್ದರಿಂದ ಪ್ರವಾಸಿಗರು ಪ್ರಾಣಿ ಲೋಕದ ಜೊತೆಗೆ ಸಸ್ಯ ಪ್ರಪಂಚವನ್ನು ಕಣ್ತುಂಬಿಕೊಳ್ಳಲು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇನ್ನು ಅರಣ್ಯದ ನಡುವೆ ಪ್ರಾಣಿಗಳನ್ನು ಸ್ವತಂತ್ರವಾಗಿ ಓಡಾಡುವುದನ್ನು ನೋಡಿ ಆನಂದಿಸಲು ಇಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ.ಇದೀಗ ಈ ಮೃಗಾಲಯ ಹೆಚ್ಚಿನ ಪ್ರಾಣಿಗಳು ಕಾಣಲು ಸಿಗುತ್ತಿವೆ.
ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ (Zoo) ನೂತನ ಸದಸ್ಯರ ಆಗಮನವಾಗಿದೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೃಗಾಲಯದ ಅಧಿಕಾರಿಗಳು ಈ ಪ್ರಾಣಿಗಳ ಚಿತ್ರ ಬಿಡುಗಡೆ ಗೊಳಿಸಿದ್ದಾರೆ.
ಇದೇ ಮೊದಲ ಬಾರಿ ಶಿವಮೊಗ್ಗದ ಮೃಗಾಲಯಕ್ಕೆ ಔರಂಗಬಾದ್ ನಿಂದ ಬಿಳಿ ಹುಲಿ ಆಗಮನವಾಗಿದೆ. ಇನ್ನು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.
ಮೂರು ಬಂಗಾಳ ಹುಲಿಗಳು
ಔರಂಗಬಾದ್ ನಿಂದ 2 ವರ್ಷದ ಶ್ರಾವಣಿ ಮತ್ತು 5 ವರ್ಷದ ರೋಹಿಣಿ, ಇಂದೋರ್ ಮೃಗಾಲಯದಿಂದ 3 ವರ್ಷ ಭದ್ರಾ ಆಗಮಿಸಿದೆ.
ಎರಡು ಸಿಂಹಗಳ ಆಗಮನ
ಇಂದೋರ್ ಮೃಗಾಲಯದಿಂದ ಎರಡು ಸಿಂಹಗಳು ಆಗಮಿಸಿವೆ. 2 ವರ್ಷದ ಸಿಂಹ ಶಿವ, 2 ವರ್ಷದ ಸಿಂಹಿಣಿ ಸಾರಾ ಆಗಮಿಸಿದ್ದು ಮೃಗಾಲಯದ ಮೆರುಗು ಹೆಚ್ಚಿಸಿದೆ.