For the best experience, open
https://m.kannadavani.news
on your mobile browser.
Advertisement

Sirsi :ಸರ್ಕಾರಿ ನೌಕರಿ ಕೊಡಿಸುವುದಾಗಿ 200ರೂ ವಂಚನೆ - 30 ವರ್ಷದ ನಂತರ ಬಂಧನ!

ಕಾರವಾರ:- ಸರ್ಕಾರಿ ನೌಕರಿ ಕೊಡಿಸುವುದಾಗಿ 30 ವರ್ಷದ ಹಿಂದೆ  200ರೂಪಾಯಿ ಪಡೆದು ವಿದ್ಯಾರ್ಥಿಯೋರ್ವನನ್ನು ವಂಚಿಸಿದ ಪ್ರಕರಣದಲ್ಲಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಸುಪರ್ಧಿಗೆ ವಹಿದಿದ್ದಾರೆ.
11:14 PM Jun 30, 2025 IST | ಶುಭಸಾಗರ್
ಕಾರವಾರ:- ಸರ್ಕಾರಿ ನೌಕರಿ ಕೊಡಿಸುವುದಾಗಿ 30 ವರ್ಷದ ಹಿಂದೆ  200ರೂಪಾಯಿ ಪಡೆದು ವಿದ್ಯಾರ್ಥಿಯೋರ್ವನನ್ನು ವಂಚಿಸಿದ ಪ್ರಕರಣದಲ್ಲಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಸುಪರ್ಧಿಗೆ ವಹಿದಿದ್ದಾರೆ.
sirsi  ಸರ್ಕಾರಿ ನೌಕರಿ ಕೊಡಿಸುವುದಾಗಿ 200ರೂ ವಂಚನೆ   30 ವರ್ಷದ ನಂತರ ಬಂಧನ

Sirsi :ಸರ್ಕಾರಿ ನೌಕರಿ ಕೊಡಿಸುವುದಾಗಿ 200ರೂ ವಂಚನೆ - 30 ವರ್ಷದ ನಂತರ ಬಂಧನ!

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ:- ಸರ್ಕಾರಿ ನೌಕರಿ ಕೊಡಿಸುವುದಾಗಿ 30 ವರ್ಷದ ಹಿಂದೆ  200ರೂಪಾಯಿ ಪಡೆದು ವಿದ್ಯಾರ್ಥಿಯೋರ್ವನನ್ನು ವಂಚಿಸಿದ ಪ್ರಕರಣದಲ್ಲಿ 30 ವರ್ಷದ ನಂತರ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಸುಪರ್ಧಿಗೆ ವಹಿದಿದ್ದಾರೆ.

ಬೈಂದೂರಿ ಮೂಲದ ಪ್ರಸ್ತುತ ಬೆಂಗಳೂರಿನ  ಬಳೆಪೇಠೆಯಲ್ಲಿ  ನೆಲಸಿರುವ ಬಿ.ಕೆ.ರಾಮಚಂದ್ರರಾವ್ ಬಂಧಿತ ಆರೋಪಿಯಾಗಿದ್ದಾನೆ.

ಈತನು 1990 ರಲ್ಲಿ ಶಿರಸಿಯಲ್ಲಿ ಬಿಳಿಗಿರಿ ಕೊಪ್ಪ ವೆಂಕಟೇಶ ವೈದ್ಯ ಎಂಬಾತನು ಪದವಿ ಓದುತ್ತಿರುವಾಗ ನೀಲಕಂಠ ಹೆಗಡೆ  ಎಂಬುವವರ ಮೂಲಕ ಪರಿಚಯವಾಗಿ  ವೆಂಕಟೇಶ್ ಎಂಬಾತನಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ 200 ರೂ ಗಳನ್ನು ಪಡೆದು ವಂಚಿಸಿ ಪರಾರಿಯಾಗಿದ್ದನು.

ಇದನ್ನೂ ಓದಿ:-Sirsi: ಒಂದು ವಾರದ ನಂತರ ಗಂಗಾವಳಿ ನದಿಯಲ್ಲಿ ಪತ್ತೆಯಾಯ್ತು ಪವನ್ ಶ**

ಈ ಕುರಿತು ಶಿರಸಿ ಠಾಣೆಯಲ್ಲಿ ವೆಂಕಟೇಶ್ ವೈದ್ಯ ದೂರು ದಾಖಲಿಸಿದ್ದರು‌ ಆದರೇ ಆರೋಪಿ ಪತ್ತೆಯಾಗಿರಲಿಲ್ಲ. ಆದರೇ ಡಿವೈ ಎಸ್.ಪಿ   ಗೀತಾ ಪಾಟೀಲ್ ಹಾಗೂ ಶಿರಸಿ ಗ್ರಾಮೀಣ ಠಾಣೆಯ ಪಿ ಐ ಮಂಜುನಾಥ್ ಎಮ್ ಮಾರ್ಗದರ್ಶನ ಮತ್ತು ಪಿಎಸ್ಐ ಸಂತೋಷಕುಮಾರ್ ಎಮ್ ಹಾಗೂ ಅಶೋಕ್ ರಾಠೋಡ್ ರವರ ತಂಡ 30 ವರ್ಷದ ನಂತರ ಆರೋಪಿಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿ ಬಂಧಿಸಿ ಶಿರಸಿಗೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:-Sirsi: ರಾತ್ರೂ ರಾತ್ರಿ ಶಿರಸಿಯಲ್ಲಿ ಎರಡುಕಡೆ ಗೋ ಕಳ್ಳತನ! ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆ ,ವಿಡಿಯೋ ನೋಡಿ

ಅಪರಾಧ ಮಾಡಿದವರು ಒಂದಲ್ಲಾ ಒಂದು ದಿನ ಸಿಕ್ಕಿಹಾಕಿಕೊಳ್ಳಲೇ ಬೇಕು ಎಂಬುದು ಈ ಘಟನೆಯಿಂದ ಸಾಬೀತಾಗಿದ್ದು ಇದೀಗ ಕಾರವಾರ ಜೈಲಿಗೆ ಅಟ್ಟಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ