ಕುಮಾರಸ್ವಾಮಿ,ಸಿದ್ದರಾಮಯ್ಯನವರಿಗೆ ತಾವು ಏನು ಮಾತನಾಡುತ್ತೇವೆ ಎಂಬ ಅರಿವಿಲ್ಲ ರಾಜಕೀಯವಾಗಿ ಹತಾಶರಾಗಿದ್ದಾರೆ- ಸಚಿವ ಶಿವರಾಮ್ ಹೆಬ್ಬಾರ
ಕಾರವಾರ : ರಾಜಕೀಯವಾಗಿ ಹತಾಶರಾಗಿರುವ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಆರ್.ಎಸ್.ಎಸ್. ಟೀಕಿಸಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಮನುವಿಕಾಸ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ನಗರದ ರಾಘವೇಂದ್ರ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ " ಕೆರೆ ಸಮಾವೇಶ ದಲ್ಲಿ ಭಾಗವಹಿಸಿ ಮಾತನಾಡಿದ ಅವರು
ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರಿಬ್ಬರಿಗೆ ತಾವು ಯಾರನ್ನು ಟೀಕಿಸುತ್ತಿದ್ದೇವೆ ಎಂಬ ಅರಿವಿಲ್ಲ ಅವರಿಬ್ಬರೂ
ಪರಸ್ಪರ ಟೀಕಿಸಿಕೊಳ್ಳುತ್ತಾರೆ. ಒಮ್ಮೆಲೆ ಸಂಘ ಪರಿವಾರದ ಮೇಲೆ ಹರಿಹಾಯುತ್ತಾರೆ. ಇದು ಅವರಿಬ್ಬರೂ ಗೊಂದಲ್ಲಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದರು.
ವಿಜಯ ದಶಮಿ ಮುಗಿಯಲಿ ಎಂದು ಕಾಯುತ್ತಿದ್ದೆವು. ಇಂದಿನಿಂದ ಎಲ್ಲ ಸಚಿವರೂ ಹಾನಗಲ್ ಕ್ಷೇತ್ರದಲ್ಲಿ ಬೀಡು ಬಿಡಲಿದ್ದು ಅ.28ರ ವರೆಗೆ ನಿರಂತರ ಪ್ರಚಾರ ನಡೆಸಲಿದ್ದೇವೆ' ಎಂದರು.
ಇನ್ನು ಮನುವಿಕಾಸ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ನಗರದ ರಾಘವೇಂದ್ರ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ " ಕೆರೆ ಸಮಾವೇಶ " ದಲ್ಲಿ ಭಾಗವಹಿಸಿ ಮಾತನಾಡಿದ ಹೆಬ್ಬಾರ್ , ಕೃಷಿಕ, ಸೈನಿಕ ಇವರನ್ನು ನಾವು ಗೌರವಿಸದೇ ಇದ್ದರೆ ನಮಗೆ ಬದುಕಲು ಸಾಧ್ಯವೇ ಇಲ್ಲ. ರೈತರು ಕೃಷಿಯಿಂದ ವಿಮುಖವಾದರೆ ದೇಶ ಸಫಲತೆ ಕಾಣಲು ಸಾಧ್ಯವೇ ಇಲ್ಲ. ಆದ್ದರಿಂದ ರೈತರ ಗೌರವಿಸುವ ಅವರಿಗೆ ಗೌರವ ಕೊಡುವ ಕಾರ್ಯವಾಗಬೇಕು ಎಂದರು.
ಈಗಾಗಲೇ ಬೇಡ್ತಿ ನೀರಿನ ಯೋಜನೆಯ ಮೂರನೇ ಹಂತದ ಕಾರ್ಯ ಮುಂದುರೆದಿರುವುದಾಗಿ ಹೇಳಿದ ಅವರು, ಸರಕಾರ ಸಾಕಷ್ಟು ನೀರಿನ ಯೋಜನೆಗಳ ಬಗ್ಗೆ ಕಾರ್ಯ ನಿರ್ವಹಿಸುತ್ತಿದ್ದು, ಮನುವಿಕಾಸದಂತ ಸಂಸ್ಥೆ ಕೆರೆ ಹೂಳೆತ್ತುವ ಮೂಲಕ ಪೂರಕ ಕಾರ್ಯ ನಿರ್ವಹಿಸುತ್ತಿದೆ ಎಂದರು. ಈ ಸಂದರ್ಭದಲ್ಲಿ ಮನು ವಿಕಾಸ ಸಂಸ್ಥೆಯ ಅಧ್ಯಕ್ಷರಾದ ಗಣಪತಿ ಭಟ್, ಡಿವೈ ಎಸ್ ಪಿ ರವಿ ನಾಯ್ಕ, ಜಿಲ್ಲೆಯ ಹಾಗೂ ಹಾವೇರಿ ಜಿಲ್ಲೆಯ ಪ್ರಗತಿಪರ ರೈತರ, ಕೃಷಿಕರು ಉಪಸ್ಥಿತರಿದ್ದರು.