Mahakumbh ಮೇಳದಲ್ಲಿ ಕಾಲ್ತುಳಿತ 10 ಸಾವು,ಹಲವರಿಗೆ ಗಂಭೀರ ಗಾಯ.
Mahakumbh ಮೇಳದಲ್ಲಿ ಕಾಲ್ತುಳಿತ 10 ಸಾವು,ಹಲವರಿಗೆ ಗಂಭೀರ ಗಾಯ.
ಪ್ರಯಾಗ್‌ರಾಜ್: ಮಹಾಕುಂಭ ಮೇಳದಲ್ಲಿ (Mahakumbh )ಕಾಲ್ತುಳಿತ (Stampede) ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದು ,ನೂರಾರು ಜನರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದು ಮೌನಿ ಅಮಾವಾಸ್ಯೆ (Mauni Amavasya) ಹಿನ್ನೆಲೆಯಲ್ಲಿ ಕೋಟ್ಯಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತವಾಗಿದೆ.
ಅಧಿಕಾರಿಗಳ ಪ್ರಕಾರ, ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನಕ್ಕಾಗಿ ಹೆಚ್ಚಿನ ಸಂಖ್ಯೆಯ ಯಾತ್ರಾರ್ಥಿಗಳು ಸೇರಿದ್ದಾಗ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ:-Kumbhamela ಮೇಳದಲ್ಲಿ ಮಿಂಚುತ್ತಿರೋ ಈ ಬ್ಯೂಟಿಫುಲ್ ಸಾಧ್ವಿಯಾರು ಗೊತ್ತಾ?
ಭಕ್ತರ ನೂಕುನುಗ್ಗಲಿಗೆ ಸಂಗಮ್‌ನಲ್ಲಿ ನಿರ್ಮಾಣಮಾಡಿದ್ದ ತಡೆಗೋಡೆ ಮುರಿದುಹೋಗಿ ಮೇಳದ ವಿಶೇಷ ಕರ್ತವ್ಯ ಅಧಿಕಾರಿ ಆಕಾಂಕ್ಷಾ ರಾಣಾ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಜಾತ್ರೆ ಪ್ರದೇಶದಲ್ಲಿರುವ ಸೆಂಟ್ರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಸಂಬಂಧಿಕರು ಮತ್ತು ಹಿರಿಯ ಅಧಿಕಾರಿಗಳು ಜಮಾಯಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ.
ಮೌನಿ ಅಮಾವಾಸ್ಯೆಯಂದು ನಡೆಯುವ ಅಮೃತ ಸ್ನಾನ ಮಹಾ ಕುಂಭಮೇಳದ ಪ್ರಮುಖ ಆಚರಣೆಯಾಗಿದೆ.ಈ ಹಿನ್ನೆಲೆಯಲ್ಲಿ ಸುಮಾರು 10 ಕೋಟಿ ಯಾತ್ರಾರ್ಥಿಗಳು ಭಾಗಿಯಾಗಿದ್ದರು.
ಮಹಾ ಕುಂಭಮೇಳಕ್ಕಾಗಿ ನದಿಯ 12 ಕಿ.ಮೀ. ಉದ್ದಕ್ಕೂ ಇರುವ ಸಂಗಮ್ ಮತ್ತು ಇತರ ಘಾಟ್‌ಗಳಲ್ಲಿ ಬೃಹತ್ ಜನಸಮೂಹ ಸೇರಿದ್ದು ಬುಧವಾರ ಮುಂಜಾನೆ ಈ ಘಟನೆ ನಡೆದಿದೆ.
ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳು ಸಂಗಮಿಸುವ ತ್ರಿವೇಣಿ ಸಂಗಮವನ್ನು ಹಿಂದೂಗಳು ಅತ್ಯಂತ ಪವಿತ್ರ ಸ್ಥಳವೆಂದು ಪರಿಗಣಿಸುತ್ತಾರೆ. ಮಹಾ ಕುಂಭಮೇಳದ ಸಮಯದಲ್ಲಿ ವಿಶೇಷವಾಗಿ ಮೌನಿ ಅಮಾವಾಸ್ಯೆಯಂತಹ ದಿನಾಂಕಗಳಂದು ಇಲ್ಲಿ ಸ್ನಾನ ಮಾಡುವುದರಿಂದ ಪಾಪಗಳು ತೊಳೆದುಹೋಗುತ್ತವೆ ಮತ್ತು ಮೋಕ್ಷ ಅಥವಾ ಮುಕ್ತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಈ ದಿನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವವರ ಸಂಖ್ಯೆ ಹೆಚ್ಚಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಮನವಿ:-
ಸಂಗಮದ ಎಲ್ಲಾ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ (Yogi Adityanath) ಜನರಲ್ಲಿ ಮನವಿ ಮಾಡಿದ್ದಾರೆ.
ಮಹಾಕುಂಭ ಮೇಳದಲ್ಲಿ (MahaKumba Mela) ಕಾಲ್ತುಳಿತ (Stampede) ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಯೋಗಿ ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ ಎಂದು ವಿನಂತಿ ಮಾಡಿದ್ದಾರೆ. ಸದ್ಯ ಯಾವುದೇ ಸಮಸ್ಯೆ ಇಲ್ಲ, ಎಲ್ಲವೂ ಶಾಂತರೀತಿಯಲ್ಲಿ ನಡೆಯುತ್ತಿದೆ, ಮೊದಲು ಭಕ್ತರಿಗೆ ಪವಿತ್ರ ಸ್ನಾನಕ್ಕೆ ಅವಕಾಶ ಮಾಡಿಕೊಟ್ಟು ನಂತರ ಸಾಧು ಸಂತರಿಗೆ ಅವಕಾಶ ಮಾಡಿಕೊಡಲಾಗಿದೆ. ವದಂತಿ ಸುದ್ದಿಗಳಿಗೆ ಕಿವಿಕೊಡಬೇಡಿ ಎಂದು ಹೇಳಿದ್ದಾರೆ.