For the best experience, open
https://m.kannadavani.news
on your mobile browser.
Advertisement

Tirupati Stampede ಕಾಲ್ತುಳಿತಕ್ಕೆ ಆರು ಜನ ಸಾವು ಹಲವರಿಗೆ ಗಂಭೀರ ಗಾಯ ! ಆದ ಘಟನೆ ಏನು?

ಆಂಧ್ರ ಪ್ರದೇಶದ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಟ ಏಕಾದಶಿ ದೇವರ ದರ್ಶನಕ್ಕೆ ಟಿಕೇಟ್ ಪಡೆಯಲು ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
11:33 PM Jan 08, 2025 IST | ಶುಭಸಾಗರ್
tirupati stampede ಕಾಲ್ತುಳಿತಕ್ಕೆ ಆರು ಜನ ಸಾವು ಹಲವರಿಗೆ ಗಂಭೀರ ಗಾಯ   ಆದ ಘಟನೆ ಏನು
Tirupati Stampede ಕಾಲ್ತುಳಿತಕ್ಕೆ ಆರು ಜನ ಸಾವು ಹಲವರಿಗೆ ಗಂಭೀರ ಗಾಯ ! ಆದ ಘಟನೆ ಏನು?

ಆಂಧ್ರ ಪ್ರದೇಶದ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಟ ಏಕಾದಶಿ ದೇವರ ದರ್ಶನಕ್ಕೆ ಟಿಕೇಟ್ ಪಡೆಯಲು ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಬುಧವಾರ ರಾತ್ರಿ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ದರ್ಶನದ ಟಿಕೆಟ್ ಪಡೆಯುವ ಸಂದರ್ಭದ ನೂಕು ನುಗ್ಗಲು ಉಂಟಾಗಿದೆ. ಈ ಘಟನೆಯಲ್ಲಿ ಮಹಿಳೆ ಸೇರಿ ಆರು ಭಕ್ತರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ತಿರುಪತಿ ತಿರುಮಲ ದೇವಾಲಯದ ವಿಷ್ಣುನಿವಾಸಂ ಬಳಿ ಈ ಕಾಲ್ತುಳಿತ ಸಂಭವಿಸಿದೆ. ವೈಕುಂಠ ಏಕಾದಶಿ ದರ್ಶನ ದ್ವಾರದ ವಿಶೇಷ ಟಿಕೆಟ್ ಪಡೆಯಲು ನೂಗು ನುಗ್ಗಲು ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಹೆಚ್ಚು ಭಕ್ತರು ಸೇರಿದ್ದರಿಂದ ನಿಯಂತ್ರಣ ಮಾಡಲು ಸಿಬ್ಬಂದಿ ವಿಫಲವಾದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ.

 ತಮಿಳುನಾಡಿನ (Thamilnadu) ಸೇಲಂ ಮೂಲದ ಮಹಿಳೆ ಸೇರಿದಂತೆ ಆರು ಭಕ್ತರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಭಕ್ತರ ಗುರುತುಗಳನ್ನು ಪತ್ತೆಮಾಡುವ ಕಾರ್ಯವನ್ನು ನಡೆಸಲಾಗುತ್ತಿದೆ.ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಟಿಕೆಟ್ ಹಂಚಿಕೆ ರದ್ದು.

ವೈಕುಂಠ ಏಕಾದಶಿ ದರ್ಶನದ ವೇಳೆ ಕಾಲ್ತುಳಿತ ಘಟನೆ ನಡೆದಿದ್ದರಿಂದ ಟಿಕೆಟ್ ಹಂಚಿಕೆಯನ್ನು ತತ್‌ಕ್ಷಣದಿಂದ ರದ್ದುಗೊಳಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಗುರುವಾರ ಮುಂಜಾನೆಯಿಂದ ಟಿಕೆಟ್ ನೀಡುವುದನ್ನು ಮುಂದುವರೆಸಲಿದೆ.

ಇದನ್ನೂ ಓದಿ:-Karnataka|ಎರಡು ದಶಕದ ನಕ್ಸಲ್ ಹೋರಾಟಕ್ಕೆ ತೆರೆ ಆರು Naxals ಮುಖ್ಯಮಂತ್ರಿ ಮುಂದೆ ಶರಣಾಗತಿ.

ಜನವರಿ 10 ರಿಂದ 19ರ ತನಕ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿ ದರ್ಶನದ ವಿಶೇಷ ವ್ಯವಸ್ಥೆ ಯನ್ನು ಭಕ್ತರಿಗೆ ಮಾಡಲಾಗಿದೆ. ಈ ಟಿಕೆಟ್ ಪಡೆಯಲು ಇಂದು ಮುಂಜಾನೆಯಿಂದಲೇ ಸಾವಿರಾರು ಭಕ್ತರು ತಿರುಪತಿಯಲ್ಲಿ ಕಾದು ಕುಳಿತಿದ್ದರು. ಏಕಾ ಏಕಿ ಹೆಚ್ಚು ಜನ ನುಗ್ಗಿದ ಪರಿಣಾಮ ಘಟನೆ ನಡೆದಿದೆ.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕಾಲ್ತುಳಿತ ಪ್ರಕರಣದ ಬಗ್ಗೆ ಮಾಹಿತಿ ಪಡೆದು ಅಗತ್ಯವಾಗಿ  ಬೇಕಾದ ವ್ಯವಸ್ಥೆ, ಭಕ್ತರಿಗೆ ಸೂಕ್ತ ವ್ಯವಸ್ಥೆ ಮಾಡಿ, ಪರಿಹಾರ ಕಾರ್ಯವನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ