ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Train news: ಹಾಸನ,ಮಂಗಳೂರು,ಕಾರವಾರ ರೈಲುಗಳು ರದ್ದು.

ಹಾಸನ/ಕಾರವಾರ : ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಹಾಸನ (Hassan) ಜಿಲ್ಲೆಯಲ್ಲಿ ಓಡಾಡುವ ಪ್ರಮುಖ ರೈಲುಗಳ ಸಂಚಾರವನ್ನು ಕೆಲ ದಿನಗಳ ಕಾಲ ರದ್ದು ಮಾಡಿ ರೈಲ್ವೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
10:03 PM May 17, 2025 IST | ಶುಭಸಾಗರ್
ಹಾಸನ/ಕಾರವಾರ : ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಹಾಸನ (Hassan) ಜಿಲ್ಲೆಯಲ್ಲಿ ಓಡಾಡುವ ಪ್ರಮುಖ ರೈಲುಗಳ ಸಂಚಾರವನ್ನು ಕೆಲ ದಿನಗಳ ಕಾಲ ರದ್ದು ಮಾಡಿ ರೈಲ್ವೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Train news: ಹಾಸನ,ಮಂಗಳೂರು,ಕಾರವಾರ ರೈಲುಗಳು ರದ್ದು

Advertisement

ಹಾಸನ/ಕಾರವಾರ : ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಹಾಸನ (Hassan) ಜಿಲ್ಲೆಯಲ್ಲಿ ಓಡಾಡುವ ಪ್ರಮುಖ ರೈಲುಗಳ ಸಂಚಾರವನ್ನು ಕೆಲ ದಿನಗಳ ಕಾಲ ರದ್ದು ಮಾಡಿ ರೈಲ್ವೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಬಂದ್ ಆಗಲಿದ್ದು, ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಎಕ್ಸ್ಪ್ರೆಸ್ ಸಂಚಾರವನ್ನು (ರೈಲು ಸಂಖ್ಯೆ 16539) ರದ್ದು ಮಾಡಲಾಗಿದೆ. ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540), ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ಮತ್ತು ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ ಕೂಡ ತುರ್ತು ಕಾಮಗಾರಿಗಾಗಿ (ರೈಲು ಸಂಖ್ಯೆ 16576) ರದ್ದು ಮಾಡಲಾಗಿದೆ.

ಇದನ್ನೂ ಓದಿ:-Train news: ನದಿಯ ಸೇತುವೆ ಮೇಲೆ ನಿಂತ ಇಂಟರ್ ಸಿಟಿ ರೈಲು ! ಆಗಿದ್ದೇನು?

Advertisement

ಇದಲ್ಲದೇ ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ರೈಲು ಮತ್ತು ಜೂನ್ 3 ರಿಂದ ನವೆಂಬರ್ 1, ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.

Advertisement
Advertisement
Next Article
Advertisement