Uttara Kannda ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಬೆಂಕಿ - ಲಕ್ಷಾಂತರ ಮೌಲ್ಯದ ಸಕ್ಕರೆ ಬೆಂಕಿಗಾಹುತಿ
Yallapura news :- ಚಲಿಸುತಿದ್ದ ಲಾರಿಯೊಂದು ಇಂಜಿನ್ ನಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಹೋದ ಘಟನೆ ಉತ್ತರ ಕನ್ನಡ (uttara kannda) ಜಿಲ್ಲೆಯ ಹುಬ್ಬಳ್ಳಿ- ಯಲ್ಲಾಪುರ (yallapura) ರಾಷ್ಟ್ರೀಯ ಹೆದ್ದಾರಿ 63 ರ ಅರೆಬೈಲ್ ಘಟ್ಟದಲ್ಲಿ ನಡೆದಿದೆ.
ಇದನ್ನೂ ಓದಿ:-Yallapura |ಭಟ್ಟರ ಮನೆಯ ಮೂರು ಲಕ್ಷಕ್ಕೂ ಹೆಚ್ಚು ಮೌಲ್ಯದ ಅಡಿಕೆ ಕದ್ದ ಕಳ್ಳ ಜೈಲಿಗೆ
ಬಾಗಲಕೋಟೆಯಿಂದ ಸಕ್ಕರೆ ತುಂಬಿಕೊಂಡು ಯಲ್ಲಾಪುರ ಮಾರ್ಗದಲ್ಲಿ ಕೇರಳಕ್ಕೆ ಹೋಗುತಿದ್ದ ಸಂದರ್ಭದಲ್ಲಿ ಯಲ್ಲಾಪುರ ವ್ಯಾಪ್ತಿಯ ಅರೆಬೈಲ್ ಗಟ್ಟದಲ್ಲಿ ಇಂಜಿನ್ ನಲ್ಲಿ ಶಾರ್ಟ ಸರ್ಕ್ಯೂಟ್ ಆಗಿದ್ದು ಬೆಂಕಿ ಹೊತ್ತಿಕೊಂಡಿದೆ.

ತಕ್ಷಣ ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಲಾರಿಯಿಂದ ಜಿಗಿದು ಚಾಲಕ ,ಕ್ಲೀನರ್ ಪ್ರಾಣ ರಕ್ಷಿಸಿಕೊಂಡಿದ್ದಾರೆ.ಬೆಂಕಿ ಅವಘಡಕ್ಕೆ ಲಕ್ಷಾಂತರ ಮೌಲ್ಯದ ಸಕ್ಕರೆ ಹಾಗೂ ಲಾರಿ ಸಂಪೂರ್ಣ ಸುಟ್ಟು ಹೋಗಿದೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆದ್ದಾರಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಘಡನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.