ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Uttara kannda :ಐದು ವರ್ಷದಲ್ಲಿ 866 ಗೋವುಗಳ ರಕ್ಷಣೆ -ಈ ವರೆಗೆ ದಾಖಲಾದ ಪ್ರಕರಣ ಎಷ್ಟು ,ಇಲಾಖೆ ವಿವರ ಇಲ್ಲಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ (uttara kannda) ಗೋ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತಿದ್ದು ಸಾರ್ವಜನಿಕರ ಮಾಹಿತಿ ಆಧಾರದಲ್ಲಿ ಉತ್ತರ ಕನ್ನಡ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
06:36 PM Jan 21, 2025 IST | ಶುಭಸಾಗರ್
Uttarakannda SP M.Narayan

Uttara kannda news:-ಉತ್ತರ ಕನ್ನಡ ಜಿಲ್ಲೆಯಲ್ಲಿ (uttara kannda) ಗೋ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತಿದ್ದು ಸಾರ್ವಜನಿಕರ ಮಾಹಿತಿ ಆಧಾರದಲ್ಲಿ ಉತ್ತರ ಕನ್ನಡ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.

Advertisement

ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಅಕ್ರಮವಾಗಿ ಗೋವುಗಳ ಸಾಗಾಟ ನಡೆಸಿದವರ ವಿರುದ್ಧ ಒಟ್ಟೂ 138 ಪ್ರಕರಣಗಳನ್ನು ದಾಖಲಿಸಿ ಒಟ್ಟೂ 866 ಗೋವುಗಳನ್ನು ರಕ್ಷಣೆ ಮಾಡಲಾಗಿದೆ.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಗೋವುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 23 ಪ್ರಕರಣಗಳು ದಾಖಲಿಸಿ ಇದರಲ್ಲಿ ಒಟ್ಟೂ 34 ಗೋವುಗಳ ರಕ್ಷಣೆ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಅಕ್ರಮ ಗೋವು ಸಾಗಾಟ ಮತ್ತು ಗೋವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಒಟ್ಟೂ 467 ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ .

Advertisement

ಅಲ್ಲದೇ ಅಕ್ರಮ ಗೋವುಗಳ ಸಾಗಾಟ ಮತ್ತು ಗೋವು ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಗಸ್ತುಗಳನ್ನು ಹೆಚ್ಚಿಸಿ ಚೆಕ್‌ಪೋಸ್ಟ್‌ಗಳನ್ನು ತೆರೆದು ಸೂಕ್ತ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ:-Honnavara ಗರ್ಭಿಣಿ ಆಕಳು ರುಂಡ ,ಕಾಲು ಕಡಿದು ,ಕರುಹತ್ಯೆ ಮಾಡಿದ ದುರುಳರು!

ಜನವರಿ 19 ರಂದು ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ನಡೆದ ಗೋವು ಕಳ್ಳತನ ಮತ್ತು ವಧೆಗೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿತರ ಪತ್ತೆಗೆ ಪ್ರತ್ಯೇಕ 06 ತಂಡಗಳನ್ನು ರಚನೆ ಮಾಡಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ಆರೋಪಿತರ ಪತ್ತೆಗೆ ಕ್ರಮ. ಕೈಗೊಳ್ಳಲಾಗಿದ್ದು ಶಂಕಿತ ಐದು ಜನರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಅಕ್ರಮ ಗೋವು ಸಾಗಾಟ ಮತ್ತು ಗೋಹತ್ಯೆಯ ಕುರಿತಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ .ನಾರಾಯಣ್ ರವರ ಮೊಬೈಲ್ ಸಂಖ್ಯೆ : 9480805201 ನೇದಕ್ಕೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದ್ದು, ನೀಡುವ ಯಾವುದೇ ಮಾಹಿತಿಯನ್ನು ಗೌಪ್ಯವಾಗಿರಿಸಿ ಪೊಲೀಸ್ ಕಾರ್ಯಾಚರಣೆ ನಡೆಸಿ ಆರೋಪಿಗಳ ವಿರುದ್ಧ ನಿರ್ಧಾಕ್ಷೀಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Honnavara news uttarakannda:- ಗೋಹತ್ಯೆಯಾದ ಸ್ಥಳ

ಇದನ್ನೂ ಓದಿ:-Honnavar ಗೋ ಹತ್ಯೆ ಪ್ರಕರಣ ಶಂಕಿತರ ಐದು ಜನರ ಬಂಧನ| ಕಾಡು ಸುತ್ತಿದ SP,ASP

ಸಾರ್ವಜನಿಕರು ಯಾವುದೇ ಭಯ ಭೀತಿಗೆ ಒಳಗಾಗದೇ ಮತ್ತು ಸುಳ್ಳು ವದಂತಿಗಳಿಂದ ಆತಂಕಕ್ಕೆ ಒಳಗಾಗದಂತೆ ನೋಡಿಕೊಂಡು ಸಾರ್ವಜನಿಕ ಶಾಂತತೆಯನ್ನು ಕಾಪಾಡುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮನವಿ ಮಾಡಲಾಗಿದೆ.

 

Advertisement
Tags :
Cattle ProtectionCow rescueCrime CasesKarnatakaLaw EnforcementM.narayanPolice ActionUttara Kannada
Advertisement
Next Article
Advertisement