Murdeshwar ಪ್ರವಾಸಿ ತಾಣದಲ್ಲಿ ಸರಣಿ ಸಾವು- ಜಿಲ್ಲಾಧಿಕಾರಿ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ದಾಖಲು
Murdeshwar /ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಮುರುಡೇಶ್ವರದ (murdeshwar) ಕಡಲ ತೀರದಲ್ಲಿ ಪ್ರವಾಸಿಗರ ಸರಣಿ ಸಾವುಗಳು ಸಂಭವಿಸುತಿದ್ದು ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷ ಕಾರಣ ಎಂದು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋಧ್ಯಮ ಇಲಾಖೆ ಉಪ ನಿರ್ದೇಶಕರ ವಿರುದ್ಧ ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ ರವರು ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ:-Murdeshwar ದುರಂತ- ಆರು ಜನ ಶಿಕ್ಷಕರ ಮೇಲೆ ಪ್ರಕರಣ ದಾಖಲು- ತಲಾ5 ಲಕ್ಷ ಪರಿಹಾರ ಘೋಷಣ
ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ , ಪ್ರವಾಸೋಧ್ಯಮ ಇಲಾಖೆ ಉಪನಿರರ್ದೇಶಕ ಜಯಂತ ವಿರುದ್ಧ ದೂರು ದಾಖಲಾಗಿದ್ದು ಈ ದೂರಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2020/25 ಸುಪ್ರೀಂ ಕೋರ್ಟ ಮಾರ್ಗಸೂಚಿಗಳು ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ನಿಯಮ ಉಲ್ಲಂಘನೆ ಯಾಗಿದೆ. ಕೋಲಾರದ ವಿದ್ಯಾರ್ಥಿನಿಯರ ಸಾವು ಹಾಗೂ ಬೆಂಗಳೂರು ಕಾಲೇಜು ವಿದ್ಯಾರ್ಥಿ ಸಾವು ಸಂಭವಿಸಿದೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.