Uttara kannda :ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಇನೋವಾ ವಾಹನ, ಎಂಟು ಜನರಿಗೆ ಗಾಯ, ಓರ್ವ ಗಂಭೀರ
Uttara kannda :ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಇನೋವಾ ವಾಹನ, ಎಂಟು ಜನರಿಗೆ ಗಾಯ, ಓರ್ವ ಗಂಭೀರ


ಕಾರವಾರ : ಹುಬ್ಬಳ್ಳಿಯಿಂದ (Hubli) ಪ್ರವಾಸಕ್ಕೆಂದು ದಾಂಡೇಲಿಗೆ ಬರುತ್ತಿದ್ದ ಪ್ರವಾಸಿಗರ ಇನೋವಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಡಿಕ್ಕಿ ಹೊಟೆದು ಪಲ್ಟಿಯಾಗಿ ಎಂಟು ಜನ ಗಾಯಗೊಂಡು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ತಾಟಗೇರಾ ಕ್ರಾಸ್ ಸಮೀಪ ನಡೆದಿದೆ.
ಹುಬ್ಬಳ್ಳಿಯಿಂದ ದಾಂಡೇಲಿಗೆ (Dandeli)ಕೆಎ: 37, ಎಂ: 7877 ಸಂಖ್ಯೆಯ ಇನೋವಾ ವಾಹನದಲ್ಲಿ ಪ್ರವಾಸಕ್ಕೆಂದು ಬರುತಿದ್ದರು.
ಇದನ್ನೂ ಓದಿ:-Joida|ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಅಪಘಾತ 40 ವಿದ್ಯಾರ್ಥಿಗಳಿಗೆ ಗಾಯ
ಗಾಯಗೊಂಡವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಗಂಭೀರ ಗಾಯಗೊಂಡಿದ್ದ ಹುಬ್ಬಳ್ಳಿಯ ನಿವಾಸಿ ಅನೂಪ್ ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ರವಾನಿಸಲಾಗಿದೆ. ಉಳಿದಂತೆ ಹುಬ್ಬಳ್ಳಿ ಮೂಲದ ಮಹಮ್ಮದ್ ಪುರ್ಕಾನ್, ಮಲಿಕ್ ಇರ್ಫಾನ್ ನದಾಫ್ ಮತ್ತು ಅಲಿಸಾಬ್ ಇರ್ಫಾನ್ ನದಾಫ್ ಅವರಿಗೂ ಗಂಭೀರ ಸ್ವರೂಪದ ಗಾಯವಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಧಾರವಾಡ ಆಸ್ಪತ್ರೆಗೆ ರವಾನಿಸಲಾಗಿದೆ.
ಉಳಿದಂತೆ ಕೌಶಿಕ್ ಮತ್ತು ನಂದನ್ ಹಾಗೂ ಇನ್ನಿತರರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರಕ್ಕೆ ಡಿಕ್ಕಿಯಾದ ಪರಿಣಾಮವಾಗಿ ಇನೋವಾ ವಾಹನ ಪಲ್ಟಿಯಾಗಿ ಜಖಂಗೊಂಡಿದೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್ಐ ಜಗದೀಶ್, ಎಎಸ್ಐ ವೆಂಕಟೇಶ ತೆಗ್ಗಿನ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಪ್ರಕರಣ ದಾಖಲಿಸಿದ್ದಾರೆ.