ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Uttara kannda : ಬಿಸಿ ಗಾಳಿ ಎಚ್ಚರಿಕೆ ಜಿಲ್ಲಾಡಳಿತದಿಂದ ಅಲರ್ಟ

ಕಾರವಾರ :- ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಆರು ಪ್ರದೇಶದಲ್ಲಿ ತಾಪಮಾನ ಏರಿಕೆಯ ಎಚ್ಚರಿಕೆ ನೀಡಿದ್ದು 35 ರಿಂದ 41 ಡಿಗ್ರಿಗೂ ಹೆಚ್ಚು ಉಷ್ಣಾಂಶ ಹೆಚ್ಚಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
10:42 PM Feb 26, 2025 IST | ಶುಭಸಾಗರ್

Uttara kannda : ಬಿಸಿ ಗಾಳಿ ಎಚ್ಚರಿಕೆ ಜಿಲ್ಲಾಡಳಿತದಿಂದ ಅಲರ್ಟ

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ :- ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಆರು ಪ್ರದೇಶದಲ್ಲಿ ತಾಪಮಾನ ಏರಿಕೆಯ ಎಚ್ಚರಿಕೆ ನೀಡಿದ್ದು 35 ರಿಂದ 41 ಡಿಗ್ರಿಗೂ ಹೆಚ್ಚು ಉಷ್ಣಾಂಶ ಹೆಚ್ಚಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದರ ಬೆನ್ನಲ್ಲೇ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸಹ ಎಚ್ಚರಿಕೆ ನೀಡಿದ್ದು ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ,ಮಂಗಳೂರು ಭಾಗದಲ್ಲಿ ಹೆಚ್ಚಿನ ತಾಪಮಾನ ದಾಖಲಾಗುವ ಎಚ್ಚರಿಕೆ ಜೊತೆಗೆ ಬಿಸಿ ಗಾಳಿಯ ಎಚ್ಚರಿಕೆ ಸಹ ನೀಡಿದೆ.

ಯಾವ ಪ್ರದೇಶದಲ್ಲಿ ಎಚ್ಚರಿಕೆ?

Advertisement

Photo copyright Google

ಕರಾವಳಿಯ(karavali) ಮೂರು ಜಿಲ್ಲೆಗಳ 7 ಸ್ಥಳಗಳಲ್ಲಿ ಸರಾಸರಿ ಉಷ್ಣಾಂಶ ಪ್ರಮಾಣ 40 ಡಿಗ್ರಿ ಸೆಲ್ಸಿಯಸ್ ಮೀರಿದೆ. ಉತ್ತರ ಕನ್ನಡ ಜಿಲ್ಲೆಯ 6, ದಕ್ಷಿಣ ಕನ್ನಡದ 4, ಉಡುಪಿಯ 2 ಕಡೆಯಲ್ಲಿ ಸರಾಸರಿ ಉಷ್ಣಾಂಶ ಸರಾಸರಿ 39 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ.

ಇದನ್ನೂ ಓದಿ:-Karwar ಪ್ರವಾಸೋಧ್ಯಮ ಇಲಾಖೆ ಕಚೇರಿಯಲ್ಲಿ ರಹಸ್ಯ ಬೆಡ್ ರೂಮ್ ಪತ್ತೆ ! 

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಿಸಿ ಹವೆ ಇರಲಿದೆ. ಆದರೆ, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಉಷ್ಣಾಂಶದ ಪ್ರಮಾಣದಲ್ಲಿ ಅಂತಹ ಏರಿಕೆ ಆಗದು ಎಂದೂ ಕೆಎಸ್‌ಎನ್‌ಎಂಡಿಸಿ ತಿಳಿಸಿದೆ.

ಚಳಿ ಕಡಿಮೆಯಾಗಿ, ಏಕಾಏಕಿ ಸೆಕೆಯ ವಾತಾವರಣ ( weather) ಆವರಿಸುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಕಡಿಮೆ ಇದ್ದರೂ ಆದ್ರ್ರತೆ ಅಧಿಕ ಇರುವ ಕಾರಣ ಸೆಕೆ ಹೆಚ್ಚಿದೆ.

ಉಷ್ಣಾಂಶ ಅಧಿಕ ಆಗಿರುವುದಿಂದ ಸೆಕೆ ಹೆಚ್ಚಾಗಬಹುದು ಎಂಬ ಆತಂಕವಿದೆ. ಇನ್ನು ಕಾರವಾರದಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು ನಿನ್ನೆ ಸಾಮಂತವಾಡದಲ್ಲಿ 41. ಡಿಗ್ರಿ ತಾಪಮಾನ ದಾಖಲಾಗಿತ್ತು.

ತಾಪಮಾನ ಹೆಚ್ಚಾಗಿ ಬಿಸಿ ಗಾಳಿಯ ಕಾರಣದಿಂದ ಜನ ರಸ್ತೆಗಿಳಿಯಲು ಹೆದರುತಿದ್ದು ಕೆಲವರಲ್ಲಿ ತಲೆನೋವು, ದೇಹದ ದಣಿವು ಕಾಣಿಸಿಕೊಕಾರವಾರುತ್ತರ

ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಸಾರ್ವಜನಿಕರಿಗೆ ಅಲರ್ಟ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC)ಯ ಇಂದಿನ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಈ ಕೆಳಗೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.

*ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

*ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

*ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ನಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

*ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ.

*ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

*ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

*ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

*ನಿಮಗೆ ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

*ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು-ಬಲೀಕರಣ ಮಾಡಲು ಸಹಾಯ ಮಾಡುತ್ತದೆ.

*ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

*ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಕಂಡುಬಂದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ (1077) (08382229857) ಸಂಪರ್ಕಿಸಲು ಸೂಚಿಸಲಾಗಿದೆ.

Advertisement
Tags :
Coastal Karnataka weatherheate waveKarnatakaweather reportಕರಾವಳಿ ಉಷ್ಣಾಂಶ
Advertisement
Next Article
Advertisement