Karwar :ಬಾಲಮಂದಿರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ.
Karwar :ಬಾಲಮಂದಿರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ.

ಕಾರವಾರ :- ಕಾರವಾರ(karwar) ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಗುರುವಾರ ಬೆಳಗ್ಗೆ ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಎಸ್.ಎಸ್.ಎಲ್.ಸಿ ಪೂರ್ವ ಸಿದ್ದತಾ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಬಾಲಕಿ ಏಕಾ ಏಕಿ ಇಂದು ಬಾಲಮಂದಿರದಲ್ಲೇ ಕುತ್ತಿಗೆಗೆ ವಯರ್ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಾರವಾರದ ಕೋಡಿಬಾಗದ ಶ್ವೇತಾ ಫಣಿಕ್ಕರ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.
ಇದನ್ನೂ ಓದಿ:-Karwar :ಅರಣ್ಯ ಇಲಾಖೆಯಿಂದ 111 ಆಲಿವ್ ರಿಡ್ಲೆ ಕಡಲಾಮೆ ಸಮುದ್ರಕ್ಕೆ.
ಬಾಲ ಮಂದಿರದ ವಾರ್ಡನ್ ಹಾಗೂ ಸಿಬ್ಬಂದಿಯ ಕಿರುಕುಳ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:-Kumta :ಕತಗಾಲ್ ನಲ್ಲಿ ಆಹಾರ ಸಿಗದೇ ನಿತ್ರಾಣಗೊಂಡ ಕರಿ ಚಿರತೆ ರಕ್ಷಣೆ
ವಿಷಯ ತಿಳಿದ ಬಳಿಕ ಪೊಲೀಸ್ ಅಧಿಕಾರಿಗಳು ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ನಂತರ ಕುಟುಂಬಕ್ಕೆ ಶವ ಹಸ್ತಾಂತರಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದರು. ಘಟನೆ ಸಂಬಂಧ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.