WEATHER :ಕರಾವಳಿ ಮಲೆನಾಡಿನಲ್ಲಿ ಮಳೆ ಸೂಚನೆ ಇಂದು ಹೇಗಿದೆ ಹವಾಮಾನ ವಿವರ ಇಲ್ಲಿದೆ.
Weather report :-ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ(Rain) ಮುನ್ಸೂಚನೆ ಇದೆ.
ನವೆಂಬರ್ 22ರ ವರೆಗೆ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಲೆನಾಡು ಭಾಗದ ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಲಿದ್ದು ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಒಳನಾಡು ಭಾಗ ಹಾಗೂ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು ಭಾಗದಲ್ಲಿ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ನವೆಂಬರ್ 19ರ ತನಕ ದಕ್ಷಿಣ ಒಳನಾಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಉತ್ತರ ಸುಮಾತ್ರ ಕರಾವಳಿಯಲ್ಲಿ ನವೆಂಬರ್ 21ರಂದು ಉಂಟಾಗುವ ವಾಯುಭಾರ ಕುಸಿತವು ನವೆಂಬರ್ 27 ಅಥವಾ 28ರಂದು ಉತ್ತರ ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿಗೆ ಚಂಡಮಾರುತವಾಗಿ ಅಪ್ಪಳಿಸುವ ಲಕ್ಷಣಗಳಿವೆ.
ಇದರ ಪರಿಣಾಮದಿಂದ ರಾಜ್ಯದಲ್ಲೂ ಮಳೆಯಾಗುವ ಲಕ್ಷಣಗಳಿವೆ.